ಕೋಲಾರ: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು.
ಇದೇ ಸಂದರ್ಭದಲ್ಲಿ ಎಂ.ಟಿ.ಬಿ.ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ.
ಈ ವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.
ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…