ನವದೆಹಲಿ : ತಾಪಮಾನ ಬದಲಾವಣೆಯಿಂದ ಭಾರತದಲ್ಲಿ ಬಿಸಿ ಗಾಳಿ ತೀವ್ರವಾಗುತ್ತಿದ್ದು, ದೇಶದಾದ್ಯಂತ ಶೇ 90ರಷ್ಟು ಜನರು ‘ಅತ್ಯಂತ ಅಪಾಯ‘ ಅಥವಾ ‘ಎಚ್ಚರಿಕೆ‘ ವಲಯದಲ್ಲಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ.
ಕೇಂಬ್ರಿಡ್ಜ್ ಯೂನಿವರ್ಸಿಟಿಯ ರಮಿತ್ ದೇವನಾಥ್ ಹಾಗೂ ಅವರ ಸಹೋದ್ಯೋಗಿಗಳು ಸೇರಿ ಈ ಅಧ್ಯಯನ ನಡೆಸಿದ್ದಾರೆ.ಮುಖ್ಯವಾಗಿ, ದೇಶದಲ್ಲೇ ಬಿಸಿಗಾಳಿಯ ತೀವ್ರ ಬಾಧೆಗೆ ಒಳಪಟ್ಟ ಪ್ರದೇಶ ದೆಹಲಿ ಎನಿಸಿಕೊಂಡಿದೆ. ಇದರ ನಿಯಂತ್ರಣಕ್ಕಾಗಿ ಇಲ್ಲಿನ ಸರ್ಕಾರ ಪರಿಣಾಮಕಾರಿಯಾದ ಪರಿಹಾರ ಯೋಜನೆ ರೂಪಿಸಿಲ್ಲ ಎಂದು ಅಧ್ಯಯನ ಬಹಿರಂಗಪಡಿಸಿದೆ.
ಅಲ್ಲದೇ, ಕಳೆದ 50 ವರ್ಷಗಳಲ್ಲಿ ಬಿಸಿ ಗಾಳಿಯಿಂದ 17,000ಕ್ಕೂ ಹೆಚ್ಚಿನ ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಭೂವಿಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ ಎಂ.ರಾಜೀವನ್ ನೇತೃತ್ವ ತಂಡ ಪ್ರಕಟಿಸಿದ ಸಂಶೋಧನಾ ವರದಿ ಉಲ್ಲೇಖಿಸಿದೆ.
ಈ ವರದಿಯಲ್ಲಿ, 1971ರಿಂದ 2021ರ ವರೆಗೆ ದೇಶದ ವಿವಿಧೆಡೆ 706 ಬಾರಿ ಬಿಸಿಗಾಳಿ ಬೀಸಿದ ಘಟನೆಗಳು ಕಂಡುಬಂದಿವೆ ಎಂಬ ಸಾಲುಗಳಿವೆ.
ವಿಶ್ವಸಂಸ್ಥೆ ತಿಳಿಸಿದ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸುವುದರಲ್ಲಿ ಭಾರತಕ್ಕೆ ‘ಬಿಸಿ ಗಾಳಿ ಬಾಧೆ‘ ಅಡ್ಡಿಪಡಿಸಿದೆ. ಸರ್ಕಾರಗಳು ದೇಶದ ವಾಯುಗುಣವನ್ನು ಪುನರ್ ಪರಿಶೀಲನೆಗೆ ಒಳಪಡಿಸಿ ಈಗಿಂದಲೇ ಎಚ್ಚೆತ್ತುಕೊಳ್ಳಬೇಕೆಂದು ಅಧ್ಯಯನವು ಎಚ್ಚರಿಕೆ ನೀಡಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…