BREAKING NEWS

ನಿಮ್ಮ ಪುತ್ರ ಎಷ್ಟು ರನ್ ಗಳಿಸಿದ್ದಾರೆ: ಅಮಿತ್ ಶಾಗೆ ಉದಯನಿಧಿ ಸ್ಟಾಲಿನ್ ಪ್ರಶ್ನೆ

ಚೆನ್ನೈ: ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ ಆಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಅಮಿತ್ ಶಾ ಅವರು ಶುಕ್ರವಾರ ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರ ಪಾದಾಯಾತ್ರೆಗೆ ಚಾಲನೆ ನೀಡಿ, ವಂಶ ರಾಜಕೀಯದ ಕುರಿತು ಮಾತನಾಡಿದ್ದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಡಿಎಂಕೆ ಮಿತ್ರ ಪಕ್ಷಗಳು ರಾಜವಂಶದ ರಾಜಕಾರಣವನ್ನು ಉತ್ತೇಜಿಸುತ್ತಿವೆ ಎಂದು ಅವರು ಆರೋಪಿಸಿದ್ದರು ಹಾಗೂ ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದರು.

ಚೆನ್ನೈನಲ್ಲಿ ಡಿಎಂಕೆ ಯೂತ್ ವಿಂಗ್ನ ಹೊಸ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಉದಯಾನಿಧಿ, “ಚುನಾವಣೆಯಲ್ಲಿ ಸ್ಪರ್ಧಿಸಿದ ನಂತರ ನಾನು ಶಾಸಕನಾಗಿದ್ದೇನೆ. ಆ ನಂತರ ನನ್ನನ್ನು ಮಂತ್ರಿಯನ್ನಾಗಿ ಮಾಡಲಾಯಿತು” ಎಂದು ಪ್ರತಿಪಾದಿಸಿದರು.

“ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಾನು ಅಮಿತ್ ಶಾರನ್ನು ಕೇಳಲು ಬಯಸುತ್ತೇನೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿ ಆಗಿದ್ದು ಹೇಗೆ?. ಜಯ ಶಾ ಅವರು ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ ಹಾಗೂ ಅವರು ಎಷ್ಟು ರನ್ ಗಳಿಸಿದ್ದಾರೆ?” ಎಂದು ಉತ್ತರಿಸುವಂತೆ ಉದಯಾನಿಧಿ ಆಗ್ರಹಿಸಿದ್ದಾರೆ.

andolanait

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

2 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

2 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

5 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

5 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

5 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

6 hours ago