ಬೆಂಗಳೂರು : ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರಿಗೆ ದುಪಟ್ಟು ಹಣ ವಸೂಲಿ ಮಾಡುತ್ತವೆ. ಇದೀಗ ಸೆಪ್ಟಂಬರ್ 18 ರಂದು ಗಣೇಶ ಹಬ್ಬ ಹಿನ್ನೆಲೆ ಖಾಸಗಿ ಬಸ್ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ.ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್ಗಳ ದರ ಹೆಚ್ಚಿಸಲಾಗಿದೆ. ಇನ್ನು ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಸಹ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಮಾಡಿದೆ ಎಂಬ ಮಾಹಿತಿ ಗಣೇಶ ಹಬ್ಬದ ಹಿಂದಿನ ದಿನ ಊರಿಗೆ ಹೋಗಬೇಕೆಂದರೇ ಎರಡು-ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತೆರಳಬೇಕು. ನಗರದ ಪ್ರದೇಶದಲ್ಲಿ ದುಡಿಯಲು ಬಂದಿರುವ ಜನರು ಕೆಲಸ ಮುಗಿಸಿ ತಮ್ಮ ತಮ್ಮ ಊರಿಗೆ ತೆರಳುತ್ತಾರೆ ಇದನ್ನೇ ನೆಪ ಮಾಡಿಕೊಂಡು ಖಾಸಗಿ ಬಸ್ ಟಿಕೆಟ್ ದರಗಳನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ ಎನ್ನಲಾಗಿದೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…