BREAKING NEWS

ಮನುಷ್ಯರಿಗೆ ಜಿಕಾ ವೈರಸ್ ಸೋಂಕು ತಗುಲಿಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆಯಾದರೂ, ಮನುಷ್ಯರಲ್ಲಿ ಸೋಂಕು ಕಂಡುಬಂದಿಲ್ಲ.. ಗರ್ಭಿಣಿಯರು ಎಚ್ಚರಿಕೆಯಿಂದಿರಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಝೀಕಾ ವೈರಸ್ ಪಾಟಿಸಿವ್ ಆಗಿರುವುದು ಪತ್ತೆಯಾಗಿಲ್ಲ. ಆದರೂ ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಮನುಷ್ಯರಲ್ಲಿ ಝೀಕಾ ಪಾಸಿಟಿವ್ ಬಂದಿಲ್ಲ. ಸೊಳ್ಳೆಗಳಿಗೆ ಬಂದಿದೆ. ಚಿಕ್ಕಬಳ್ಳಾಪುರದ ಹೊಂಡದಲ್ಲಿದ್ದ ಸೊಳ್ಳೆಗಳ ಪೂಲ್ ನಲ್ಲಿ ಜಿಕಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ 10 ದಿನಗಳ ಹಿಂದೆ ವರದಿ ಬಂದಿದೆ ಎಂದರು.

ಅಂತೆಯೇ, ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು. ಆದರೆ ಝೀಕಾ ಮತ್ತು ನಿಫಾ ವೈರಸ್ ಬೇರೆ ಬೇರೆಯಾಗಿವೆ. ನಿಫಾ ಗಂಭೀರ ಸ್ವರೂಪದ ವೈರಾಣು ಆದರೆ ಝೀಕಾ ಬಗ್ಗೆ ಭಯ ಬೇಡ. ಆದರೂ ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಆಸ್ಪತ್ರೆಯಲ್ಲಿ ಇದ್ದವರಿಗೆ ಪರೀಕ್ಷೆ ಮಾಡಲಾಗಿದೆ. ಖಾಯಿಲೆ ಲಕ್ಷಣ ಇದ್ದವರ ಸ್ಯಾಂಪಲ್ ಪಡೆಯಲಾಗಿದೆ.

ಇನ್ನು 3 ದಿನಗಳಲ್ಲಿ ರಿಪೋರ್ಟ್ ಬರುವ ಸಾಧ್ಯತೆ ಇದೆ. ವೈರಲ್ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಸರ್ವಿಲೆನ್ಸ್ ಮಾಡಿರುವುದಕ್ಕೆ ಈಗ ವೈರಸ್ ಪತ್ತೆಯಾಗಿದೆ ಎಂದು ತಿಳಿಸಿದರು.

https://x.com/PTI_News/status/1720006586238734601?s=20

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

3 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

3 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

3 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

3 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

3 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

3 hours ago