ಹೈದರಾಬಾದ್ : ತೆಲುಗಿನ ಪ್ರಸಿದ್ಧ ಗಾಯಕ, ಕವಿ, ಹೋರಾಟಗಾರ ಗದ್ದರ್ ಇಂದು ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಗುಮ್ಮಡಿ ವಿಟ್ಟಲ್ ರಾವ್ ಅವರು ಗದ್ದರ್ ಎಂದೇ ಪ್ರಸಿದ್ದರಾಗಿದ್ದರು. ಗದ್ದರ್ ಅವರು ಹೈದರಾಬಾದ್ ನ ಪ್ರಮುಖ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅಲ್ಲಿ ಅವರು ರವಿವಾರ ಕೊನೆಯುಸಿರೆಳೆದರು.
ಗದ್ದರ್ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಗುಮ್ಮಡಿ ವಿಟ್ಟಲ್ ರಾವ್ (ಜನನ 1949), ಗದ್ದರ್ ಎಂದೇ ಚಿರಪರಿಚಿತರಾಗಿದ್ದರು. 2010ರ ವರೆಗೆ ನಕ್ಸಲ್ ಚಳವಳಿಯಲ್ಲಿ ಸಕ್ರೀಯವಾಗಿದ್ದ ಅವರು ನಂತರ ತೆಲಂಗಾಣ ರಾಜ್ಯ ರಚನೆಗಾಗಿ ಚಳವಳಿಯಲ್ಲಿ ಸೇರಿಕೊಂಡರು.
ತೆಲಂಗಾಣ ಚಳವಳಿಯ ಸಮಯದಲ್ಲಿ ಗದ್ದರ್ ಅವರು ತಮ್ಮ ಹಾಡುಗಳಿಂದಲೇ ಪ್ರಮುಖ ಪಾತ್ರವನ್ನು ನಿರ್ವಹಿಸಿದರು. ಅವರು ತೆಲಂಗಾಣ ಚಳವಳಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದು, ಈ ಭಾಗದಲ್ಲಿ ಅನ್ಯಾಯಗಳನ್ನು ಪರಿಹರಿಸಲು ತಮ್ಮ ಗಾಯನವನ್ನು ಬಳಸಿದರು.
ಇತ್ತೀಚೆಗೆ ಖಮ್ಮಂನಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಗದ್ದರ್ ಭಾಗವಹಿಸಿದ್ದರು.
1949ರಲ್ಲಿ ತೂಪ್ರಾನ್‌ನಲ್ಲಿ ಗುಮ್ಮಡಿ ವಿಠಲ್ ರಾವ್ ಆಗಿ ಜನಿಸಿದ ಗದ್ದರ್ 2010ರ ವರೆಗೆ ನಕ್ಸಲಿಸಂ ಚಳವಳಿಯೊಂದಿಗೆ ಸಂಬಂಧ ಹೊಂದಿದ್ದರು. ನಂತರ ಅವರು ತೆಲಂಗಾಣ ಚಳವಳಿಯಲ್ಲಿ ಪ್ರಮುಖ ವ್ಯಕ್ತಿಯಾದರು.
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…