ಬೆಂಗಳೂರು: ಸಿಎಲ್ ಪಿ ಸಭೆ ನಡೆಯುತ್ತಿರುವ ಶಾಂಗ್ರಿ – ಲಾ ಹೋಟೆಲ್ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮಯ್ಯ ಫೋಟೋ ಹಿಡಿದುಕೊಂಡು ಸಿದ್ದು ಸಿಎಂ ಎಂದು ಘೋಷಣೆ ಕೂಗುತ್ತಿದ್ದರೆ, ಡಿಕೆಶಿ ಬೆಂಬಲಿಗರು ಡಿಕೆಶಿ ಸಿಎಂ ಎಂದು ಘೋಷಣೆ ಕೂಗುತ್ತಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಯಾರು ಎಂಬ ಕುರಿತಾಗಿ ಶಾಸಕರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ.
ಒಂದು ಕಡೆಯಲ್ಲಿ ಸಿಎಲ್ ಪಿ ಸಭೆ ನಡೆಯುತ್ತಿದ್ದರೆ ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರ ಘೋಷಣೆ ಜೋರಾಗಿದೆ. ಡಿಕೆಶಿ ಬೆಂಬಲಿಗರು ಡಿಕೆ ಡಿಕೆ ಎಂದು ಘೋಷಣೆ ಕೂಗುತ್ತಿದ್ದಾರೆ ಮತ್ತೊಂದು ಕಡೆಯಲ್ಲಿ ಸಿದ್ದು ಸಿದ್ದು ಎಂದು ಸಿದ್ದರಾಮಯ್ಯ ಕಡೆಯವರು ಘೋಷಣೆ ಕೂಗುತ್ತಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಸಿಎಂ ಯಾರು ಆಗಬೇಕು ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ಎರಡು ಶಕ್ತಿಗಳು ಇದ್ದಂತೆ ಎಂದರು. ಇನ್ನು ಸಚಿವ ಸ್ಥಾನ ವಿಚಾರವಾಗಿ ಮಾತನಾಡಿ, ನಾನು ಸನ್ಯಾಸಿ ಅಲ್ಲ, ಆದರೆ ರಾಜ್ಯ ನಾಯಕರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಕಡಿಮೆ ಸೀಟು ಬಂದಿದ್ದರೆ ಆಪರೇಷನ್ ಕಮಲ ಮಾಡುತ್ತಿದ್ದರು ಬಿಜೆಪಿಯವರು ಎಂದು ಬಿಜೆಪಿ ವಿರುದ್ಧನೂ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ ಆಗಮಿಸಿದ್ದಾರೆ. ಭಾನುವಾರ ಬೆಳಿಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡಿದ ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದರು. ಸುರ್ಜೇವಾಲ ಅವರ ಸೂಚನೆ ಮೇರೆಗೆ ಶಾಸಕಾಂಗ ಸಭೆಗೆ ಆಗಮಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಮಾತನಾಡಿ, ಲಿಂಗಾಯತ ಸಮುದಾಯದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಟ್ಟಿದೆ. ಈ ನಿಟ್ಟಿನಲ್ಲಿ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಯಕತ್ವ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…