BREAKING NEWS

ನಾನು ನರೇಂದ್ರ ಮೋದಿ ಅವರ ದೊಡ್ಡ ಅಭಿಮಾನಿ: ಎಲಾನ್‌ ಮಸ್ಕ್

ನ್ಯೂಯಾರ್ಕ್:‌ ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ (ಜೂನ್‌ 21) ಟೆಸ್ಲಾ ಕಂಪನಿ ಸಿಇಒ, ಟ್ವೀಟರ್‌ ಮಾಲೀಕ ಎಲಾನ್‌ ಮಸ್ಕ್‌ ಅವರನ್ನು ಭೇಟಿಯಾಗಿದ್ದು, ನಾನು ನರೇಂದ್ರ ಮೋದಿ ಅವರ ಅಭಿಮಾನಿಯಾಗಿದ್ದೇನೆ ಎಂದು ಮಸ್ಕ್‌ ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರೊಂದಿಗಿನ ಅದ್ಭುತ ಮಾತುಕತೆಯಾಗಿದ್ದು, ನಾನು ಅವರನ್ನು ತುಂಬಾ ಇಷ್ಟಪಡುತ್ತೇನೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಹಾಗಾಗಿ ನಾವು ಅಪರಿಚಿತರಲ್ಲ. ಭಾರತದ ಭವಿಷ್ಯದ ಬಗ್ಗೆ ನಾನು ತುಂಬಾ ಉತ್ಸುಕನಾಗಿದ್ದೇನೆ. ಜಗತ್ತಿನ ಎಲ್ಲಾ ದೇಶಕ್ಕಿಂತಲೂ ಭಾರತವು ಹೆಚ್ಚು ಭರವಸೆಯ ರಾಷ್ಟ್ರವಾಗಿದೆ ಎಂದು ಭಾವಿಸುತ್ತೇನೆ” ಎಂದು ಮಸ್ಕ್‌ ಶ್ಲಾಘಿಸಿದ್ದಾರೆ.

ಭಾರತದಲ್ಲಿ ಟೆಸ್ಲಾ ಕಂಪನಿ ಆರಂಭಿಸುವ ಯೋಜನೆ ಇದೆಯಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಎಲಾನ್‌ ಮಸ್ಕ್‌ ಅವರು, ಖಂಡಿತವಾಗಿಯೂ ಟೆಸ್ಲಾ ಭಾರತದಲ್ಲಿ ಶೀಘ್ರದಲ್ಲೇ ಕಾರ್ಯಾರಂಭಿಸಲಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ದೇಶದ(ಭಾರತ) ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದಾರೆ. ಅಷ್ಟೇ ಅಲ್ಲ ಭಾರತದಲ್ಲಿ ಹೂಡಿಕೆ ಮಾಡುವಂತೆಯೂ ಮನವಿ ಮಾಡಿಕೊಂಡಿದ್ದಾರೆ. ನಾವು ಆ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಮಸ್ಕ್‌ ಹೇಳಿದರು.

2015ರ ಅಮೆರಿಕದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಲಿಫೋರ್ನಿಯಾದಲ್ಲಿರುವ ಟೆಸ್ಲಾ ಮೋಟಾರ್ಸ್‌ ಫ್ಯಾಕ್ಟರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

9 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

10 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

11 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

16 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

23 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

23 hours ago