Mysore
19
scattered clouds

Social Media

ಶನಿವಾರ, 24 ಜನವರಿ 2026
Light
Dark

ಮದ್ಯದಂಗಡಿ ಹೆಚ್ಚಳಕ್ಕೆ ನನ್ನ ವಿರೋಧವಿದೆ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೆಚ್ಚು ಅನುಮತಿ ಕೊಡುವುದಕ್ಕೆ ನಮ್ಮ ವಿರೋಧ ಇದೆ. ಮಹಿಳಾ ಸಬಲೀಕರಣಕ್ಕೆ ಇಷ್ಟೆಲ್ಲಾ ಒತ್ತು ಕೊಟ್ಟು ಇದರ ಮಧ್ಯೆ ಜನಸಂಖ್ಯೆ ಆಧಾರಿತವಾಗಿ ಮದ್ಯದಂಗಡಿ ಹೆಚ್ಚಳಕ್ಕೆ ಸರ್ಕಾರದ ಭಾಗವಾದರೂ ನಾನು ವಿರೋಧ ಇದ್ದೇನೆ ಎಂದರು.

ಮಹಿಳೆಯರು ಕೂಡ ಇದನ್ನ ಇಷ್ಟಪಡಲ್ಲ. ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ. ಇಂತಹ ನಿರ್ಧಾರಕ್ಕೆ ನಮ್ಮ ವಿರೋಧ ಇದೆ. ಸಿಎಂ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ರಾವಣ, ಕೀಚಕ ಅನ್ನೋದು ಬಿಜೆಪಿಯವರ ಸಂಸ್ಕೃತಿಯನ್ನ ತೋರಿಸುತ್ತೆ. ಬಿಜೆಪಿಯವರು ರಾಮ ಅಂತಾರೆ ಬಾಯಿ ತೆಗೆದರೆ ರಾಮನ ಬಗ್ಗೆ ಮಾತನಾಡ್ತಾರೆ ರಾವಣನ ಕಾಯಕ ಮಾಡುತ್ತಾರೆ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!