BREAKING NEWS

ನಾನೇನು ಸನ್ಯಾಸಿ ಅಲ್ಲ, ರಾಜಕೀಯ ಮಾಡಿ ತೋರಿಸುತ್ತೇನೆ : ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ

ಬೆಂಗಳೂರು : ಟಿಕೆಟ್ ಕೈತಪ್ಪಿದ ಕಾರಣದಿಂದ ಬೇಸತ್ತುಕೊಂಡಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಅಭಿಯಾನಿಗಳ ಜೊತೆಗೆ ಸಭೆ ನಡೆಸಿ ತಮ್ಮ ಮುಂದಿನ ನಿರ್ಧಾರವನ್ನು ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.
ಮೂಡಿಗೆರೆ ಕ್ಷೇತ್ರದಲ್ಲಿ ಎಂಪಿ ಕುಮಾರಸ್ವಾಮಿ ವಿರುದ್ಧ ಬಿಜೆಪಿಯಲ್ಲೇ ಬಂಡಾಯ ಎದ್ದಿತ್ತು. ಶಾಸಕರ ಕಾರ್ಯವೈಖರಿಯ ಬಗ್ಗೆ ಒಂದು ಬಣದ ತೀವ್ರ ವಿರೋಧ ಇತ್ತು. ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಸಮ್ಮುಖದಲ್ಲಿಯೇ ಎಂಪಿ ಕುಮಾರಸ್ವಾಮಿ ವಿರುದ್ಧ ಒಂದು ಬಣದ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದರು. ಎಂಪಿ ಕುಮಾರಸ್ವಾಮಿ ಬದಲಾಗಿ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.

ರಾಜೀನಾಮೆ ಪತ್ರದಲ್ಲಿ ಏನಿದೆ : ಪಕ್ಷದಲ್ಲಿನ ಕೆಲವು ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಕೋರಿಕೆಯನ್ನು ಅಂಗೀಕರಿಸಬೆಕಾಗಿ ವಿನಂತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಎಂಪಿ ಕುಮಾರಸ್ವಾಮಿ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ‘ಈಗಾಗಲೇ ಸಾಕಷ್ಟು ಅಭಿಮಾನಿಗಳು ಮನೆಗೆ ಬಂದಿದ್ದಾರೆ. ಅವರ ಜೊತೆಗೆ ಸಭೆ ನಡೆಸಿ ಶುಕ್ರವಾರ ಒಂದು ನಿರ್ಧಾರವನ್ನು ಕೈಗೊಳ್ಳುತ್ತೇನೆ’ ಎಂದರು.

ನಾನೇನು ಸನ್ಯಾಸಿ ಅಲ್ಲ : ಇನ್ನೂ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಎಂಪಿ ಕುಮಾರಸ್ವಾಮಿ, ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸ್ಥಾನವೂ ಗೆಲ್ಲುವುದಿಲ್ಲ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಜತೆ ಚರ್ಚಿಸಿ ಮುಂದಿನ ನಿರ್ಧಾರ ತಿಳಿಸುತ್ತೇನೆ. ನಾನೇನು ಸನ್ಯಾಸಿ ಅಲ್ಲ, ರಾಜಕೀಯ ಮಾಡಿ ತೋರಿಸುತ್ತೇನೆ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಆಕ್ರೋಶ ಹೊರಹಾಕಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ, ನಾನೆಂದು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಕ್ಷೇತ್ರದ ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಂಡಿದ್ದು ಹೈಕಮಾಂಡ್‌ಗೆ ತಪ್ಪಾಗಿ ಕಂಡಿದೆ. ಇದು ಪರಮಾಶ್ಚರ್ಯ, ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದ ಪ್ರತಿ ಸರ್ವೇಯಲ್ಲಿಯೂ ಮುನ್ನಡೆಯಿದ್ದೆ. ಆದರೂ ಟಿಕೆಟ್‌ ನಿರಾಕರಿಸಿರುವುದು ನೋವಿನ ವಿಚಾರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅದಲ್ಲದೇ ಜೆಡಿಎಸ್‌ನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ.

ಬಿಜೆಪಿಯಲ್ಲಿ ಬಂಡಾಯ.. ಬಂಡಾಯ.. : ಚುನಾವಣೆಗೆ ಟಿಕೆಟ್‌ ಘೋಷಣೆ ಬೆನ್ನಲ್ಲಿಯೇ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿದೆ. ಇದುವರೆಗೂ ಎರಡು ಪಟ್ಟಿಯಲ್ಲಿ 212 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿರುವ ಬಿಜೆಪಿ ಬಂಡಾಯವನ್ನು ಎದುರಿಸುತ್ತಿದೆ. ಟಿಕೆಟ್‌ ವಂಚಿತ ಹಲವರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಅದಲ್ಲದೇ ಪಕ್ಷೇತರರಾಗಿ ಸ್ಪರ್ಧೆಗೂ ಮುಂದಾಗಿದ್ದಾರೆ. ಈಗಾಗಲೇ ಪ್ರಮುಖವಾಗಿ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸ್ತಾರೆ ಎನ್ನಲಾಗಿದೆ. ಕೆಎಸ್‌ ಈಶ್ವರಪ್ಪ, ಎಸ್‌ ಅಂಗಾರ ಸೇರಿ ಹಲವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

lokesh

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

10 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

11 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

11 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

12 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

12 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

14 hours ago