ಬೆಂಗಳೂರು : ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರ ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗಾಗಿ ಮಾಜಿ ಗೃಹ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ.
ತಮ್ಮ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮಲ್ಲಿಕಾರ್ಜುನ ಖರ್ಗೆ, ಈಶ್ವರ್ ಖಂಡ್ರೆ ಮನ ನೋಯಿಸುವ ಉದ್ದೇಶವಿರಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಎಲ್ಲೂ ಉಲ್ಲೇಖಿಸಿಲ್ಲ. ಖಂಡ್ರೆ ಅವರನ್ನು ನೋಯಿಸಬೇಕು ಎಂಬ ಉದ್ದೇಶದಿಂದಲೂ ಮಾತನಾಡಿಲ್ಲ. ನನ್ನ ಮಾತಿನಿಂದ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.
ಖರ್ಗೆ ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ : ʼʼಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನ ಎಲ್ಲೂ ನಾನು ಉಲ್ಲೇಖಿಸಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಅನುಭವಿ ರಾಜಕಾರಣಿ, ಹಿರಿಯ ಮುತ್ಸದ್ದಿ. ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲʼʼ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಆರಗ ಜ್ಞಾನೇಂದ್ರ ಹೇಳಿದ್ದೇನು? : ʼʼನಮ್ಮ ದುರಾದೃಷ್ಟ ಎಂದ್ರೇ ಆ ಭಾಗದವರು ಫಾರೆಸ್ಟ್ ಮಿನಿಸ್ಟರ್ ಅಗಿದ್ದಾರೆ. ಫಾರೆಸ್ಟ್ ಇಲ್ಲದವರು ಮಿನಿಸ್ಟರ್ ಅಗಿದ್ದಾರೆ. ಅವರಿಗೆ ಮರ- ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ, ಮರದ ನೆರಳು ಗೊತ್ತಿಲ್ಲ..ಸುಟ್ಟು ಕರಕಲಾಗಿರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ, ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆʼʼ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…