ನನಗೂ ಸಿಎಂ ಆಗುವ ಯೋಗ್ಯತೆ ಇದೆ: ಸಚಿವ ಉಮೇಶ್‌ ಕತ್ತಿ

ಧಾರವಾಡ: ನನಗೂ ಸಿಎಂ ಆಗುವ ಯೋಗ್ಯತೆ ಇದೆ ಎನ್ನುವ ಮೂಲಕ ಸಚಿವ ಉಮೇಶ್‌ ಕತ್ತಿ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸೋಮವಾರ ಮಾತನಾಡಿದ ಅವರು, ನಾನು 8 ಸಲ ಶಾಸಕ, 6 ಇಲಾಖೆ ನಿರ್ವಹಿಸಿದವನು. ನನಗೆ ಅನುಭವ ಇದೆ. ಯಾವುದೇ ಕಪ್ಪು ಚುಕ್ಕೆ ಇಲ್ಲ. ಕಳಂಕರಹಿತ ಶಾಸಕ, ಸಚಿವನಾಗಿ ಕೆಲಸ ಮಾಡಿದ್ದೇನೆ. ಪಕ್ಷ ತೀರ್ಮಾನ ಮಾಡಿದರೆ ಮುಖ್ಯಮಂತ್ರಿ ಆಗುವ ಆಸೆ ಇದೆ. ಸಿಎಂ ಆದ ಮೇಲೆ ಪ್ರಧಾನಿಯಾಗುವ ಆಸೆಯೂ ಇರುತ್ತೆ. ಈಗ ಸದ್ಯಕ್ಕೆ ಅಖಂಡ ಕರ್ನಾಟಕದಲ್ಲಿ ಬದುಕಿದ್ದೇನೆ. ಕರ್ನಾಟಕದ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕಕ್ಕೆ ತೊಂದರೆಯಾದರೆ ಪ್ರತ್ಯೇಕತೆ ಕೂಗು ಎಬ್ಬಿಸುವೆ. ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುತ್ತೇನೆ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ. ಉತ್ತರ ಕರ್ನಾಟಕವನ್ನು ಒಡೆಯುವ ಉದ್ದೇಶ ನನಗಿಲ್ಲ. ಅಖಂಡ ಕರ್ನಾಟಕದಲ್ಲಿದ್ದು ಅದನ್ನು ಆಳಬೇಕೆಂಬ ಉದ್ದೇಶ ನನಗಿದೆ ಎಂದು ತಿಳಿಸಿದ್ದಾರೆ.

× Chat with us