ಬೆಂಗಳೂರು : ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಭಾನುವಾರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಮೈಲ್ಡ್ ಸ್ಟ್ರೋಕ್ ನಿಂದ ಕುಮಾರಸ್ವಾಮಿಯವರು ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೂಡಲೇ ವೈದ್ಯರು ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ದು, ಇದೀಗ ಎಚ್‌ಡಿಕೆ ಗುಣಮುಖರಾಗಿ ಇಂದು ಬಿಡುಗಡೆ ಹೊಂದಿದ್ದಾರೆ.
ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ದೇವರ ಮತ್ತು ತಂದೆ ತಾಯಿ ಆಶೀರ್ವಾದದಿಂದ ಗುಣಮುಖನಾಗಿ ಇಂದು ಬಿಡುಗಡೆ ಹೊಂದಿದ್ದೇನೆ. ಈ ಹಿಂದೆಯೂ ನಾನು ತೀವ್ರ ಅನಾರೋಗ್ಯಕ್ಕೀಡಾಗಿದ್ದೆ. ಗುಣಮುಖನಾಗಿ ಹೊರಬಂದೆ, ಇಂದು ಮತ್ತೆ ಗುಣಮುಖನಾಗಿದ್ದೇನೆ. ಭಗವಂತ ನನಗೆ ಮೂರನೇ ಜನ್ಮ ನೀಡಿದ್ದಾನೆ ಎಂದರು.
ಭಗವಂತನ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ದೇವರು, ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ ಐದು ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ ಆಶೀರ್ವಾದದಿಂದ ಪುನರ್ಜನ್ಮ ಸಿಕ್ಕಿದೆ. ಮೊದಲು ಫ್ಯಾಮಿಲಿ ವೈದ್ಯರಾದ ಡಾ.ಮಂಜುನಾಥ್ ಅವರಿಗೆ ಕರೆ ಮಾಡಿದ್ದೆ, ನಂತರ ಅಪೋಲೊ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾದೆ. ಅಪೋಲೊ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…