ಬೆಂಗಳೂರು : ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾಗಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆಯೇ ‘ಸಿದ್ದರಾಮಯ್ಯ ಎಂಬ ನಾನು’ ಹೆಸರಿನಲ್ಲಿ ಸಿನಿಮಾ ಮಾಡಲು ಮುಂದಾಗಿದ್ದಾರೆ ನಿರ್ದೇಶಕ ನಾಗರಾಜು ಬಿ. ಈಗಾಗಲೇ ತಮ್ಮ ಸಿನಿಮಾದ ಪೋಸ್ಟರ್ ಅನ್ನು ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯನವರ ಜೀವನವನ್ನು ಆಧರಿಸಿ ಚಿತ್ರ ಮಾಡುವುದಾಗಿ ಸತ್ಯರತ್ನಂ ಎನ್ನುವವರು ಹೇಳಿಕೊಂಡಿದ್ದರು. ಈ ಸಿನಿಮಾದಲ್ಲಿ ‘ಲೀಡರ್ ರಾಮಯ್ಯ’ ಎಂದು ಹೆಸರಿಟ್ಟಿದ್ದರು. ರಾಮನವಮಿಯ ದಿನದಂದು ಸಿನಿಮಾದ ಪೋಸ್ಟರ್ ಅನ್ನು ಸಿದ್ದರಾಮಯ್ಯ ಅವರ ಬೆಂಗಳೂರಿನ ನಿವಾಸದಲ್ಲೇ ಬಿಡುಗಡೆ ಮಾಡಲಾಗಿತ್ತು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ತಯಾರಿಸುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು.
ಪೋಸ್ಟರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ, ಈವರೆಗೂ ಆ ಚಿತ್ರದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮಾಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಅದು ಕೂಡ ಈವರೆಗೂ ಅಧಿಕೃತವಾಗಿಲ್ಲ. ಚುನಾವಣೆ, ನೀತಿಸಂಹಿತೆ ಕಾರಣದಿಂದಾಗಿ ಸಿನಿಮಾ ಶುರು ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಈ ಸಿನಿಮಾದ ಜೊತೆಗೆ ಮತ್ತೊಂದು ಸಿನಿಮಾ ಘೋಷಣೆಯಾಗಿದೆ.
ಸಿದ್ದರಾಮಯ್ಯ ಎಂಬ ನಾನು ಚಿತ್ರತಂಡ ಹೇಳಿಕೊಂಡಂತೆ ಸದ್ಯದಲ್ಲೇ ಚಿತ್ರೀಕರಣ ಕೂಡ ಆರಂಭ ಮಾಡಲಿದ್ದಾರಂತೆ. ಆದರೆ ಈ ಕುರಿತು ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ಮಾಡಿದ್ದರೋ ಅಥವಾ ಅವರಿಗೆ ಗೊತ್ತಾಗದಂತೆ ಸಿನಿಮಾ ಮಾಡುತ್ತಿದ್ದರೋ ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ.
ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…
ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್ ಪವಾರ್…
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…