Mysore
17
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ: ಸಿ.ಎಂ.ಇಬ್ರಾಹಿಂ

ಬೆಂಗಳೂರು : ʼʼಜೆಡಿಎಸ್‌ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲʼʼ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಅವರ ನಿರ್ಧಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಈಗ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿʼʼ ಎಂದು ಎಚ್ಚರಿಸಿದರು.

ʼʼಮೊದಲು ಕಾರ್ಯಕಾರಿ ಸಮಿತಿಯ 2/3 ನೇ ಸದಸ್ಯರ ಅನುಮತಿ ಪಡೆದು ನೋಟೀಸ್ ಕೊಡಬೇಕಾಗಿತ್ತು. ನಾನು ಇಲ್ಲಿಗೇ ಇದನ್ನು ಬಿಡಲ್ಲ, ಹಾಸನದಲ್ಲಿ, ಮಂಡ್ಯದಲ್ಲಿ ಪಕ್ಷದ ಮುಖಂಡರ ಸಭೆ ಮಾಡುತೇನೆ. ಮಹಾಭಾರತದ ನಾಟಕದ ಅಂಕ ಶುರುವಾಗಿದೆ. ಯಾವ ಒಕ್ಕಲಿಗರ ಮಕ್ಕಳನ್ನು ದೇವೇಗೌಡರು ಬೆಳೆಸಿದ್ದಾರೆ? ರಾತ್ರಿ ಹಗಲು ಓಡಾಡಿ ಅವರ ಮಗನನ್ನ ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆʼʼ ಎಂದು ಬೇಸರ ವ್ಯಕ್ತಪಡಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!