ಬೆಂಗಳೂರು : ʼʼಜೆಡಿಎಸ್ ರಾಜ್ಯ ಘಟಕಕ್ಕೆ ನಾನೇ ಅಧ್ಯಕ್ಷ. ನನ್ನನ್ನು ಕೆಳಗಿಳಿಸುವ ಅಧಿಕಾರ ರಾಜ್ಯ ಉನ್ನತ ನಾಯಕರ ಸಭೆಗೆ ಇಲ್ಲʼʼ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಪಕ್ಷದ ರಾಜ್ಯ ಘಟಕ ವಿಸರ್ಜನೆ ಕುರಿತು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಅವರ ನಿರ್ಧಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇನೆ. ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಇರೋದು ಈಗ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಏನಿರುತ್ತೆ ಅಂತ ಕಾದು ನೋಡಿʼʼ ಎಂದು ಎಚ್ಚರಿಸಿದರು.
ʼʼಮೊದಲು ಕಾರ್ಯಕಾರಿ ಸಮಿತಿಯ 2/3 ನೇ ಸದಸ್ಯರ ಅನುಮತಿ ಪಡೆದು ನೋಟೀಸ್ ಕೊಡಬೇಕಾಗಿತ್ತು. ನಾನು ಇಲ್ಲಿಗೇ ಇದನ್ನು ಬಿಡಲ್ಲ, ಹಾಸನದಲ್ಲಿ, ಮಂಡ್ಯದಲ್ಲಿ ಪಕ್ಷದ ಮುಖಂಡರ ಸಭೆ ಮಾಡುತೇನೆ. ಮಹಾಭಾರತದ ನಾಟಕದ ಅಂಕ ಶುರುವಾಗಿದೆ. ಯಾವ ಒಕ್ಕಲಿಗರ ಮಕ್ಕಳನ್ನು ದೇವೇಗೌಡರು ಬೆಳೆಸಿದ್ದಾರೆ? ರಾತ್ರಿ ಹಗಲು ಓಡಾಡಿ ಅವರ ಮಗನನ್ನ ಗೆಲ್ಲಿಸಿದ್ದೇನೆ. ನನಗೆ ಅವರು ಒಳ್ಳೆಯ ಬಹುಮಾನ ಕೊಟ್ಟಿದ್ದಾರೆʼʼ ಎಂದು ಬೇಸರ ವ್ಯಕ್ತಪಡಿಸಿದರು.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…