ಕೋಲಾರ : ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೆ ಕೋಲಾರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಬುಧವಾರ ಬೆಂಬಲಿಗರು ನಗರದ ಡೂಂ ಲೈಟ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸಂಭ್ರಮಿಸಿದರು.
ನಂತರ ಪ್ರಕಾಶ್, ಸಂಸದ ಎಸ್.ಮುನಿಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಜೊತೆ ಕೆಇಬಿ ಆವರಣದಲ್ಲಿರುವ ಗಣಪತಿ ದೇವಾಲಯದಲ್ಲಿ ಹಾಗೂ ಕನಕಮಂದಿರದಲ್ಲಿ ಪೂಜೆ ಸಲ್ಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ವರ್ತೂರು, ‘ಏ.17ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವೆ. ಏ.19ರಂದು ಸಚಿವರಾದ ಮುನಿರತ್ನ ಹಾಗೂ ಡಾ.ಕೆ.ಸುಧಾಕರ್ ಸಮ್ಮುಖದಲ್ಲಿ ಸುಮಾರು 50 ಸಾವಿರ ಜನರನ್ನು ಸೇರಿಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸುವೆ’ ಎಂದರು.
‘ಕೋಲಾರ ಕ್ಷೇತ್ರಕ್ಕೆ ನಾನೇ ಸ್ಟಾರ್ ಪ್ರಚಾರಕ. ಬೇರೆ ಕ್ಷೇತ್ರಕ್ಕೂ ಹೋಗಿ ಪ್ರಚಾರ ಮಾಡುತ್ತೇನೆ. ಮತ್ತೊಬ್ಬ ಆಕಾಂಕ್ಷಿ ಓಂಶಕ್ತಿ ಚಲಪತಿ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಹುಡುಕಾಟದಲ್ಲಿದೆ. ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಪೈಪೋಟಿಯಿದೆ. ಸಿದ್ದರಾಮಯ್ಯ ಅಭ್ಯರ್ಥಿಯಾದರೆ ನನಗೆ ಇನ್ನೂ 10 ಸಾವಿರ ಹೆಚ್ಚಿಗೆ ಮತ ಬರುತ್ತವೆ’ ಎಂದರು.
ಸಂಸದ ಮುನಿಸ್ವಾಮಿ,ಕೆಯುಡಿಎ ಅಧ್ಯಕ್ಷ ವಿಜಯ್‍ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಮಾಜಿ ಸದಸ್ಯರಾದ ರೂಪಶ್ರೀ, ಅರುಣ್‍ಪ್ರಸಾದ್, ಬಂಕ್ ಮಂಜುನಾಥ್, ಮಾಗೇರಿ ನಾರಾಯಣಸ್ವಾಮಿ ಇದ್ದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…