ಮೈಸೂರು : ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬ ಸುಳ್ಳು ಸುದ್ದಿ ಹಿಂದೆಯೇ .ಡಿಕೆ ಶಿವಕುಮಾರ್ ಮತ್ತು ಸೋಮಣ್ಣ ಒಟ್ಟಿಗೆ ಕುಳಿತು ಮಾತನಾಡುತ್ತಿರುವ ಫೋಟೊ ಇದೀಗ ವೈರಲ್ ಆಗಿದ್ದು ಈವಿಚಾರ ಸಂಬಂಧ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರ ಹಿನ್ನೆಲೆ ಸಚಿವ ಸೋಮಣ್ಣ, ಮಾತಾನಾಡಿ ಡಿಕೆ ಶಿವಕುಮಾರ್ ಮತ್ತು ನಾನು ಇರುವ ಆ ಫೋಟೊ ಹಳೆಯದ್ದು ಈಗ ಆ ಫೋಟೊ ವೈರಲ್ ಆಗಿದ್ದು ಅದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ನಾನು ಬಿಜೆಪಿ ಶಾಸಕ, ಬಿಜೆಪಿ ಸರ್ಕಾರದ ಮಂತ್ರಿ. ನನಗೆ ಇತಿಮಿತಿ ಗೊತ್ತಿದೆ. ಬಿಜೆಪಿ ಪಕ್ಷದ ನಾಯಕನಾಗಿ ಕೆಲಸ ಮಾಡುತ್ತೇನೆ. ಪ್ರಧಾನಿ ಮೋದಿ, ಅಮಿತ್ ಶಾ ಸಿಎಂ ಬೊಮ್ಮಾಯಿ ನಾಯಕತ್ವ ಇದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.