BREAKING NEWS

ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ಬಿಟ್ಟುಕೊಡಲು ನನ್ನ ಸಹಮತ ಇಲ್ಲ: ಪರಮೇಶ್ವರ್‌

ಬೆಂಗಳೂರು : ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನವನ್ನು ಬಿಟ್ಟುಕೊಡಲು ನನ್ನ ಸಹಮತ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಹಿರಿಯ ಸಚಿವ ಕೆ.ಎಚ್.ಮುನಿಯಪ್ಪ ಅವರು ಇತ್ತೀಚೆಗೆ ನಡೆದ ಕಾಂಗ್ರೆಸ್ ಸರ್ವಸದಸ್ಯರ ಸಭೆಯಲ್ಲಿ ನೀಡಿದ ಹೇಳಿಕೆಗೆ ಪರಮೇಶ್ವರ್, ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದು ಅದು ಅವರ ವೈಯಕ್ತಿಕ ಅಭಿಪ್ರಾಯ. ಅವರು ಎರಡೂವರೆ ವರ್ಷದ ಬಳಿಕ ಅಕಾರ ಬಿಟ್ಟುಕೊಡಬೇಕೆಂದು ಹೇಳಿದ್ದರೆ, ಅವರೇ ಬಿಟ್ಟುಕೊಡುತ್ತಾರೆ. ನಾನೇಕೆ ಬಿಟ್ಟುಕೊಡಲಿ, ನಾನು ಹಾಗೆ ಹೇಳಿಲ್ಲ ಎಂದು ಖಾರವಾಗಿ ತಿರುಗೇಟು ನೀಡಿದರು.

ಈ ಮೂಲಕ ಸರ್ಕಾರ ರಚನೆಯಾದ ಮೂರು ತಿಂಗಳಲ್ಲೆ ಪಕ್ಷದ ಒಳಬೇಗುದಿಗಳು ಒಂದೊಂದಾಗಿ ಹೊರಬರುತ್ತಿವೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿಯಪ್ಪ ಅವರ ಹೇಳಿಕೆಗೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಪರಿಷತ್‍ಗೆ ಸುಧಾಂದಾಸ್ ಅವರನ್ನು ನೇಮಿಸುವ ಪ್ರಸ್ತಾವನೆಗೂ ಪರಮೇಶ್ವರ್ ಅಸಮಾಧಾನ ಹೊರಹಾಕಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಪಕ್ಷಕ್ಕಾಗಿ ಹೆಚ್ಚು ಕೆಲಸ ಮಾಡಿದ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಅವಕಾಶ ಮಾಡಿಕೊಡಬೇಕಿತ್ತು ಎಂಬುದಷ್ಟೇ ನಮ್ಮ ಅಭಿಪ್ರಾಯ. ಸುಧಾಂದಾಸ್ ಅವರಿಗೂ ಸಾಮಥ್ಯ ಇದೆ. ಅವರಿಗೆ ಕೊಡಬಾರದು ಎಂಬುದು ನಮ್ಮ ಅಭಿಪ್ರಾಯವಲ್ಲ. ಅವರಿಗಿಂತಲೂ ಹೆಚ್ಚು ಸಮಾಜ ಸೇವೆ ಮಾಡಿದವರಿಗೆ ಅವಕಾಶ ಮಾಡಿಕೊಡಬೇಕಿತ್ತು ಎಂದು ಹೇಳಿದರು.

ಜಾತಿ ನಿಂದನಾತ್ಮಕ ಹೇಳಿಕೆ ಆರೋಪಕ್ಕೆ ಗುರಿಯಾಗಿರುವ ನಟ ಉಪೇಂದ್ರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ತಾವು ತಪ್ಪು ಮಾಡಿರುವುದಾಗಿ ಖುದ್ದು ಉಪೇಂದ್ರರವರೇ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಕಾನೂನು ಬೇರೆಯದೇ ದೃಷ್ಟಿಯಿಂದ ನೋಡುತ್ತಿದೆ. ಪ್ರಕರಣ ದಾಖಲಾದ ಮೇಲೆ ಕ್ರಮ ತೆಗೆದುಕೊಳ್ಳುವುದು ಪೊಲೀಸರ ಜವಾಬ್ದಾರಿ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದರು.

ತಾವು ನಿನ್ನೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದು, ಈ ವಿಚಾರದ ಕುರಿತು ಚರ್ಚೆ ಮಾಡಲು ಅಲ್ಲ. ಪ್ರತಿಯೊಂದು ವಿಷಯದಲ್ಲೂ ಮುಖ್ಯಮಂತ್ರಿಯವರ ಬಳಿ ಸಲಹೆ ಕೇಳುವುದಿಲ್ಲ. ನಮಗೆ ಜವಾಬ್ದಾರಿ ನೀಡಿದ್ದಾರೆ. ಕಾನೂನು ವ್ಯವಸ್ಥೆ ತನ್ನದೇ ಆದಂತಹ ಕ್ರಮ ಕೈಗೊಳ್ಳಲಿದೆ ಎಂದರು.

ಉಪೇಂದ್ರ ಅವರ ಮಾದರಿಯಲ್ಲೇ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನರ ಹೇಳಿಕೆಯೂ ಇದ್ದರೆ ಕಾನೂನು ಸಮಾನಾಂತರವಾಗಿ ಕ್ರಮ ತೆಗೆದುಕೊಳ್ಳುತ್ತದೆ. ಯಾರೇ ತಪ್ಪು ಮಾಡಿರಲಿ, ಎಷ್ಟೇ ದೊಡ್ಡವರಿರಲಿ ಕಾನೂನು ಅದೇ ದೃಷ್ಟಿಯಿಂದ ನಡೆದುಕೊಳ್ಳುತ್ತದೆ. ಒಂದು ವೇಳೆ ವ್ಯತ್ಯಾಸವಾಗಿದ್ದರೆ ಆ ಬಗ್ಗೆ ಅಕಾರಿಗಳಿಗೆ ಸೂಚನೆ ನೀಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ತೊರೆದು ಹೋಗಿ ಮತ್ತೆ ಮರಳಿ ಬರುವುದಾಗಿ ಹೇಳುತ್ತಿರುವ ಎಸ್.ಟಿ.ಸೋಮಶೇಖರ್ ಅವರಿಗೆ ಸ್ವಾಗತ ಇದೆ. ಈ ಹಿಂದೆ ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ಅವರನ್ನು ಬೆಂಗಳೂರು ಜಿಲ್ಲಾಧ್ಯಕ್ಷರನ್ನಾಗಿ ಮಾಡಿದೆ. ಎರಡು ಬಾರಿ ಶಾಸಕರಾಗಿದ್ದರು. ಇಲ್ಲೇ ಉಳಿದಿದ್ದರೆ ಅವರು ಸಚಿವರಾಗಿರುತ್ತಿದ್ದರು. ಬಿಜೆಪಿಯಲ್ಲಿ ಬೇಸರವಾಗಿದೆ. ಮರಳಿ ಬರುತ್ತೇನೆ ಎಂದರೆ ನಾವು ವಿರೋಧ ಮಾಡುವುದಿಲ್ಲ. ಅವರನ್ನು ಸ್ವಾಗತಿಸುತ್ತೇವೆ ಎಂದರು.

ಯಾರೇ ಬರುವುದಾದರೂ ಸ್ಥಾನಮಾನಕ್ಕಾಗಿ ಬರಬಾರದು, ಪಕ್ಷದ ನಾಯಕತ್ವ ಹಾಗೂ ಸಿದ್ಧಾಂತಗಳನ್ನು ಒಪ್ಪಿಯೇ ಬರಬೇಕು. ಇಲ್ಲಿಗೆ ಬಂದ ಮೇಲೆ ಉತ್ತಮ ಕೆಲಸಗಳನ್ನು ಮಾಡಿ ಜನಪ್ರಿಯತೆ ಮತ್ತು ಸಾಮಥ್ರ್ಯವನ್ನು ಗಳಿಸಿಕೊಂಡರೆ ಮುಂದೆ ಸೂಕ್ತ ಅವಕಾಶಗಳು ದೊರೆಯುತ್ತವೆ ಎಂದು ಹೇಳಿದರು.

ಪತಿ-ಪತ್ನಿ ವರ್ಗಾವಣೆ ಪ್ರಕರಣಗಳಲ್ಲಿ ಪರಿಸ್ಥಿತಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಹುದ್ದೆಗಳು ಖಾಲಿ ಇರಬೇಕು. ಸಂದರ್ಭಗಳು ಸೂಕ್ತವಾಗಿದ್ದಾಗ ವರ್ಗಾವಣೆಗಳಾಗುತ್ತವೆ. ಐಎಎಸ್, ಐಪಿಎಸ್ ಹಾದಿಯಾಗಿ ಪತಿ-ಪತ್ನಿ ಪ್ರಕರಣಗಳಲ್ಲಿ ಎಲ್ಲಾ ಸರ್ಕಾರಿ ನೌಕರರಿಗೂ ವರ್ಗಾವಣೆ ಅವಕಾಶವಿದೆ. ದಂಪತಿಗಳನ್ನು ಬೇರೆ ಇಡಬೇಕು ಎಂಬುದು ಸರ್ಕಾರದ ಉದ್ದೇಶವಲ್ಲ ಎಂದು ತಿಳಿಸಿದರು.

andolanait

Recent Posts

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

5 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

31 mins ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

1 hour ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago