ಬೆಂಗಳೂರು : ದೇವರಾಜೇಗೌಡ ಅರೆಸ್ಟ್ ಆಗಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಹಾಗೂ ವಕೀಲರಾದ ದೇವರಾಜೇಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಈ ಬಗ್ಗೆ ನನಗೆ ಏನು ತಿಳಿದಿಲ್ಲ. ನಾನು ಪೇಪರ್ ಕೂಡ ಓದಿಲ್ಲ. ನೆನ್ನೆ ರಾತ್ರಿ ಬಿಡುವಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕಾರಣ ದೇವರಾಜೇಗೌಡ ಅವರ ಬಂಧನದ ಬಗ್ಗೆ ನನಗೆ ತಿಳಿದಿಲ್ಲ ಎಂದರು.
ಇಂದು ಕೂಡ ಪ್ರಚಾರ ಕಾರ್ಯದ ನಿಮಿತ್ತ ಕಡಪಾ ಜಿಲ್ಲೆಗೆ ಹೋಗುತ್ತಿದ್ದೇನೆ. ಅಲ್ಲಿಂದ ಬಂದ ಬಳಿಕ ಮಾತನಾಡುತ್ತೇನೆ ಎಂದು ತಿಳಿಸಿದರು.





