ನವದೆಹಲಿ/ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಯಾವುದೇ ಸುಳಿವುಗಳನ್ನು ಬಿಟ್ಟುಕೊಟ್ಟಿಲ್ಲ.
ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು.
ಭಾನುವಾರ ರಾತ್ರಿ ಬೆಂಗಳೂರಿಗೆ ಬಂದಿದ್ದ ಎಐಸಿಸಿ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ಸೋಮವಾರ ಬೆಳಗ್ಗೆ ತೆರಳಿದ್ದರು. ನಂತರ ಶಾಸಕರ ಅಭಿಪ್ರಾಯವನ್ನು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಲುಪಿಸಿದ್ದರು.
ವರಿಷ್ಠರ ಸೂಚನೆಯಂತೆ ಸಿದ್ದರಾಮಯ್ಯ ಅವರು ಸೋಮವಾರ ದೆಹಲಿಗೆ ಭೇಟಿ ನೀಡಿದ್ದು, ಅಲ್ಲಿಯೇ ರಾತ್ರಿ ತಂಗಿದ್ದರು. ಇತ್ತ ಡಿಕೆ ಶಿವಕುಮಾರ್ ಅವರು ಅನಾರೋಗ್ಯದ ಕಾರಣ ದೆಹಲಿಗೆ ತೆರಳಿಲ್ಲ.
ದೆಹಲಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಹೈಕಮಾಂಡ್ ನಿರ್ಧಾರದ ಬಗ್ಗೆ ನನಗೆ ತಿಳಿದಿಲ್ಲ. ಕರ್ನಾಟಕದಲ್ಲಿ ಯಾವ ಯಾವ ಬದಲಾವಣೆ ಆಗುತ್ತಿದೆ ಎಂಬುದು ಎಲ್ಲರಿಗೆ ತಿಳಿದಿದೆ. ಹೈಕಮಾಂಡ್ ಭೇಟಿಯ ಬಳಿಕ ನನ್ನ ಅಭಿಪ್ರಾಯ ತಿಳಿಸುತ್ತೇನೆಂದು ಹೇಳಿದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…