BREAKING NEWS

ಸಿಎಂ ಸ್ಥಾನ ಅಧಿಕಾರ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ : ಎಂಬಿ ಪಾಟೀಲ್

ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,‌ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು, ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು ಅದಕ್ಕೆ, ‌ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ಹೇಳಿದ್ದರು. ಕೆ.ಸಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ರೋ ನಾನು ಅದನ್ನು ಹೇಳಿದೆ ಎಂದರು.
ಸಿಎಂ ಸ್ಥಾನದಲ್ಲಿ ಪವರ್ ಶೇರಿಂಗ್ ಇಲ್ಲ. ಇದ್ರೆ ಅದು ಜನರ ಜೊತೆ ಮಾತ್ರ ಅಂತ‌ ಹೇಳಿದ್ರು. ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಎಐಸಿಸಿ ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದನ್ನು ಅಷ್ಟೇ ನಾನು ಹೇಳಿದ್ದು. ಪವರ್ ಶೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ರು. ನಾನು ಅದನ್ನೆ ಹೇಳಿದ್ದೇನೆ

ಇನ್ನು ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರೋಧ ವ್ಯಕ್ತಪಡಿಸಿದರು. ಡಿಕೆ ಸುರೇಶ್ ನಿವಾಸದ ಬಳಿ ಸಲೀಂ ಅಹಮದ್ ಮಾತನಾಡಿ, ಎಂಬಿ ಪಾಟೀಲ್ ಹೇಳಿಕೆ ನಾನು ನೋಡಿಲ್ಲ. ಆದರೆ ಏನೇ ಮಾತುಕತೆ ಆಗಿದ್ರೂ ಅದು ನಾಲ್ವರು ನಾಯಕರ ಮಧ್ಯೆ ಆಗಿರುವುದುಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಹಾಗೂ ಇಬ್ಬರು ನಾಯಕರ ನಡುವೆ ಆಗಿರುವ ಮಾತುಕತೆ.‌ ಏನೇ ಇದ್ದರೂ ಅದು ಅವರಿಗೆ ಮಾತ್ರ ಗೊತ್ತಿದೆ ಎಂದರು. ನಮಗೆ ಸರ್ಕಾರ ಚೆನ್ನಾಗಿ ನಡೆಸಬೇಕು, ಜನರ ನಿರೀಕ್ಷೆ ಈಡೇರಿಸಬೇಕು.‌ವರಿಷ್ಟರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ ಎಂದು ಹೇಳಿದರು.

ಇನ್ನು ಡಿಕೆ ಸುರೇಶ್ ಎಂಬಿ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ನಾನೂ ತೀಕ್ಷ್ಣವಾಗಿ ಎಚ್ಚರಿಕೆ ಕೊಡಬಲ್ಲೆ. ಆದರೆ ಈಗ ಅದು ಬೇಡ ಎಂದರು. ಇನ್ನು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಎಂಬಿ ಪಾಟೀಲ್ ಪರ ಹಾಗೂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದು, 2013 ರಲ್ಲಿ ಇಲ್ಲದ ಚರ್ಚೆ ಈಗ ಯಾಕೆ ಎಂದರು.

lokesh

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

12 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

13 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

13 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

13 hours ago