ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು, ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು ಅದಕ್ಕೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ಹೇಳಿದ್ದರು. ಕೆ.ಸಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ರೋ ನಾನು ಅದನ್ನು ಹೇಳಿದೆ ಎಂದರು.
ಸಿಎಂ ಸ್ಥಾನದಲ್ಲಿ ಪವರ್ ಶೇರಿಂಗ್ ಇಲ್ಲ. ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ರು. ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಎಐಸಿಸಿ ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದನ್ನು ಅಷ್ಟೇ ನಾನು ಹೇಳಿದ್ದು. ಪವರ್ ಶೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ರು. ನಾನು ಅದನ್ನೆ ಹೇಳಿದ್ದೇನೆ
ಇನ್ನು ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರೋಧ ವ್ಯಕ್ತಪಡಿಸಿದರು. ಡಿಕೆ ಸುರೇಶ್ ನಿವಾಸದ ಬಳಿ ಸಲೀಂ ಅಹಮದ್ ಮಾತನಾಡಿ, ಎಂಬಿ ಪಾಟೀಲ್ ಹೇಳಿಕೆ ನಾನು ನೋಡಿಲ್ಲ. ಆದರೆ ಏನೇ ಮಾತುಕತೆ ಆಗಿದ್ರೂ ಅದು ನಾಲ್ವರು ನಾಯಕರ ಮಧ್ಯೆ ಆಗಿರುವುದುಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಹಾಗೂ ಇಬ್ಬರು ನಾಯಕರ ನಡುವೆ ಆಗಿರುವ ಮಾತುಕತೆ. ಏನೇ ಇದ್ದರೂ ಅದು ಅವರಿಗೆ ಮಾತ್ರ ಗೊತ್ತಿದೆ ಎಂದರು. ನಮಗೆ ಸರ್ಕಾರ ಚೆನ್ನಾಗಿ ನಡೆಸಬೇಕು, ಜನರ ನಿರೀಕ್ಷೆ ಈಡೇರಿಸಬೇಕು.ವರಿಷ್ಟರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ ಎಂದು ಹೇಳಿದರು.
ಇನ್ನು ಡಿಕೆ ಸುರೇಶ್ ಎಂಬಿ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ನಾನೂ ತೀಕ್ಷ್ಣವಾಗಿ ಎಚ್ಚರಿಕೆ ಕೊಡಬಲ್ಲೆ. ಆದರೆ ಈಗ ಅದು ಬೇಡ ಎಂದರು. ಇನ್ನು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಎಂಬಿ ಪಾಟೀಲ್ ಪರ ಹಾಗೂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದು, 2013 ರಲ್ಲಿ ಇಲ್ಲದ ಚರ್ಚೆ ಈಗ ಯಾಕೆ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…