ಹೊಸದಿಲ್ಲಿ: ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದೆಹಲಿ ತಲುಪಿದ್ದಾರೆ. ಇಂದು ದೆಹಲಿಗೆ ತೆರಳಿ, ಅಲ್ಲಿ ಡಿ.ಕೆ.ಸುರೇಶ್ ನಿವಾಸದಲ್ಲಿ ಸಭೆ ನಡೆಸಿ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಯಾವುದಾದರೂ ಚಾನೆಲ್ ನಾನು ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವರದಿ ಮಾಡುತ್ತಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ’ ಎಂದು ಗುಡುಗಿದರು.
“ಕೆಲವರು ನಾನು ರಾಜೀನಾಮೆ ನೀಡುತ್ತೇನೆ ಎಂದು ವರದಿ ಮಾಡುತ್ತಿದ್ದಾರೆ. ನನ್ನ ತಾಯಿ ನನ್ನ ಪಕ್ಷ, ನಾನು ಈ ಪಕ್ಷವನ್ನು ಕಟ್ಟಿದ್ದೇನೆ. ಇದು ನನ್ನ ಹೈಕಮಾಂಡ್, ನನ್ನ ಶಾಸಕ, ನನ್ನ ಪಕ್ಷವಿದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಿಎಂ ಆಯ್ಕೆ ಕಗ್ಗಂಟು ಮುಂದುವರಿದಿದ್ದು, ಇಂದು ಮಧ್ಯಾಹ್ನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರ ಸಭೆ ನಡೆದಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…