ಮೈಸೂರು : ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಗೆ ಸೀಮಿತವಾಗಿ ಮಾತ್ರ ನಾನು ಹೇಳಿಕೆ ನೀಡಿದ್ದೇನೆ.
ಈ ಹಿಂದೆ ಸಿಎಂ ಆಗಿದ್ದ ಲಿಂಗಾಯತ ಸಮಾಜದವರು ಪ್ರಮಾಣಿಕರಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್, ಜೆ.ಹೆಚ್.ಪಟೇಲ್, ಎಸ್.ಆರ್.ಕಂಠಿ ಸೇರಿ ಲಿಂಗಾಯತ ಸಮುದಾಯದ ಸಿಎಂಗಳು ಅತ್ಯಂತ ಹಾನೆಸ್ಟ್ ಆಗಿದ್ದರು. ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ. ಚುನಾವಣೆ ಹಿನ್ನೆಲೆ ನನ್ನ ಹೇಳಿಕೆ ತಿರುಚಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಲಿಂಗಾಯತರ ಮೇಲೆ ವಿಶ್ವಾಸ ಇಲ್ಲದಿದ್ದರೆ ಏಕೆ ಇಷ್ಟು ಸೀಟ್ ನೀಡುತ್ತಿದ್ದೆವು ಎಂದು ಪ್ರಶ್ನಿಸಿದರು.
ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ : ಲಿಂಗಾಯತ ಅಸ್ತ್ರ ಎಂಬ ಪ್ರಶ್ನೆಗೆ ಮಾತ್ರ ನಾನು ಉತ್ತರ ನೀಡಿದ್ದೇನೆ. ಈಗಾಗಲೇ ಲಿಂಗಾಯತರೇ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ. ಸೋಮಣ್ಣ, ಆರ್ ಎಸ್ ಎಸ್ ಏನೇ ಮಾಡಿದ್ರು ಜನ ಕೈ ಹಿಡಿಯುತ್ತಾರೆ. ಸಂತೋಷ್ಗೂ, ಸೋಮಣ್ಣಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.
ಜೆಡಿಎಸ್ ಮತ್ತೆ ಬಿಜೆಪಿಗೆ ಮತ ಹಾಕದಂತೆ ಸಿದ್ಧರಾಮಯ್ಯ ಕರೆ : ನನ್ನ ಸೋಲಿಸಲು, ದಲಿತ ಮತ ವಿಭಜನೆ ಮಾಡಲು ಜೆಡಿಎಸ್ ಹಾಗೂ ಬಿಎಸ್ ಪಿ ಯಿಂದ ದಲಿತ ಅಭ್ಯರ್ಥಿ ಗಳನ್ನು ಹಾಕಿದ್ದಾರೆ. ಜೆಡಿಎಸ್, ಆರ್ ಎಸ್ ಎಸ್ ಗೆ ಮತ ಹಾಕಿದ್ರೆ ಬಿಜೆಪಿಗೆ ಹೋಗುತ್ತದೆ. ಹೀಗಾಗಿ ಬಿಎಸ್ ಪಿ , ಜೆಡಿಎಸ್ಗೆ ಮತ ಹಾಕಬೇಡಿ. ನನಗೆ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಹಾಕಿ. ಬಿಎಸ್ ಪಿ ಇಲ್ಲಿ ಗೆಲ್ಲೋದಿಲ್ಲ, ಆದರೆ ಅವರು ನನಗೆ ತೊಂದರೆ ಕೊಡೋಕೆ ನಿಂತಿರೋದು. ಜೆಡಿಎಸ್ ಮತ್ತೆ ಬಿಜೆಪಿ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಬೇಕು ಎಂದು ಪ್ರಚಾರದಲ್ಲಿ ಹೇಳಿದರು.
ಆರ್ ಎಸ್ ಎಸ್ ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ : ವರುಣ ಕ್ಷೇತ್ರದಲ್ಲೇ ನನ್ನನ್ನು ಕಟ್ಟಿಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವರುಣ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಹೇಳಿದರು.
ಆರ್ ಎಸ್ ಎಸ್, ಬಿಜೆಪಿ, ಸೋಮಣ್ಣ ಏನೇ ಮಾಡಿದರೂ ಪ್ರಯೋಜನವಾಗಲ್ಲ. ಆದರೆ ವರುಣ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಕೈಹಿಡಿಯುತ್ತಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದೆ, ಲಿಂಗಾಯತರೇ ಸಿಎಂ ಆಗಿರುವುದು. ಇವಾಗ ಅವರೇ ಅಲ್ವ ಭ್ರಷ್ಟಾಚಾರ ಮಾಡಿ ಕೆಟ್ಟ ಹೆಸರು ತಂದಿರುವುದು ಎಂದು ಕಿಡಿಕಾರಿದರು. ಈ ಚುನಾವಣೆ ಮಹತ್ತರವಾದ ಚುನಾವಣೆ. ನಿಮ್ಮೆಲ್ಲರ ಪ್ರೀತಿ, ಅಭಿಮಾನದ ಮುಂದೆ ಯಾರು ಎಷ್ಟೇ ದ್ವೇಷದ ರಾಜಕಾರಣ ಮಾಡಿದರು ಅದು ನಗಣ್ಯ. ಎರಡು ಬಾರಿ ವರುಣದಿಂದ ಗೆಲ್ಲಿಸಿದ್ದೀರಿ ಎಂದು ಹೇಳಿದರು.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…