BREAKING NEWS

ಚುನಾವಣಾ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ : ಕಟೀಲ್ ಸ್ಪಷ್ಟನೆ

ಬಳ್ಳಾರಿ : 2023ರ ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಚುನಾವಣೆಯ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಈಗಾಗಲೇ ರಾಜೀನಾಮೆ ಪತ್ರವನ್ನು ಲಿಖಿತವಾಗಿಯೂ ಕಳಿಸಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಅಕ್ಕಿ ನಿರಾಕರಣೆ ಕುರಿತು ಮಾತನಾಡಿದ ಕಟೀಲ್, ಕೇಂದ್ರದಲ್ಲಿ ಕಳೆದ ಒಂಭತ್ತು ವರ್ಷ ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ್ದೇವೆ. ಭಯೋತ್ಪಾದನಾ ಚಟುವಟಿಕೆ ಶೇ 80 ಕಡಿಮೆ ಆಗಿದೆ, ನಕ್ಸಲ್ ಹಾಗೂ ಆತಂಕವಾದ ನಿರ್ಮೂಲನೆ ಮಾಡಿದ್ದು, ಕೇಂದ್ರ ಸರ್ಕಾರದ ನಿರಂತರವಾಗಿ 5 ಕೆಜಿ ಅಕ್ಕಿ ಕೊಡುತ್ತದೆ. ದೇಶದ ಎಲ್ಲಾ ರಾಜ್ಯಗಳಿಗೆ ಅಕ್ಕಿ ಕೊಡುತ್ತದೆ. ಬರ ಮತ್ತು ನೆರೆ ಬಂದಾಗ ವಿತರಿಸಲು ಕೇಂದ್ರ ಅಕ್ಕಿ ಸಂಗ್ರಹ ಮಾಡುತ್ತದೆ ಎಂದು ಹೇಳಿದರು.

ಒಳ ಒಪ್ಪಂದ ಆಗಿಲ್ಲ : ಇನ್ನೂ ರಾಜ್ಯದಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಕಾಂಗ್ರೆಸ್ ನ ಗ್ಯಾರೆಂಟಿ ಕಾರ್ಡ್ ಗಳಿಂದ ಸರ್ಕಾರ ಬಂದಿದೆ. ಇನ್ನೂ ರಾಜ್ಯದಲ್ಲಿ ಒಳ ಒಪ್ಪಂದದ ಬಗ್ಗೆ ಬಿಜೆಪಿ ನಾಯಕರ ಹೇಳಿಕೆಯನ್ನು ಗಮನಿಸಿದ್ದೇನೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಒಳ ಒಪ್ಪಂದ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಬಿಜೆಪಿಯಿಂದ ಲಿಂಗಾಯಿತರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಕಡಗಣನೆ ಮಾಡಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತ ಮುಖ್ಯಮಂತ್ರಿ ಮಾಡಿದ್ದು, ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನ ಬಿಜೆಪಿ ಸಿಎಂ ಮಾಡಿದೆ. ರಾಜ್ಯದಲ್ಲಿ ಲಿಂಗಾಯತರು ಮತ್ತೆ ಸಿಎಂ ಆಗಬೇಕಾದ್ರೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ನನ್ನ ಅವಧಿ ಮುಕ್ತಾಯವಾಗಿದೆ, ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಆಯ್ಕೆ ನಡೆಯುತ್ತದೆ. ನೈತಿಕವಾಗಿ ನಾನು ಜವಾಬ್ದಾರಿ ಹೊತ್ತಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಿಗೆ ಜವಾಬ್ದಾರಿ ಹೊತ್ತು ರಾಜೀನಾಮೆ ಪತ್ರ ನೀಡಿದ್ದೇನೆ. ಮೌಖಿಕವಾಗಿಯೂ ರಾಷ್ಟ್ರೀಯ ಅಧ್ಯಕ್ಷ ರಿಗೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ ಬೇಡಿಕೆ ಇಟ್ಟ ವಿಚಾರವಾಗಿ ಮಾತನಾಡಿ, ಸೋಮಣ್ಣ ಹಿರಿಯ ನಾಯಕರು, ಪಕ್ಷದ ರಾಜ್ಯಾಧ್ಯಕ್ಷ ಕೇಳುವುದು ತಪ್ಪಲ್ಲ. ರಾಜ್ಯಾಧ್ಯಕ್ಷ ಸ್ಥಾನದ ಕುರಿತು ರಾಷ್ಟ್ರಾಧ್ಯಕ್ಷರು ನಿರ್ಧರಿಸುತ್ತಾರೆ ಎಂದು ಹೇಳಿದ ಅವರು, ಗೋ ಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ ನಮ್ಮ ಸರ್ಕಾರ ತಂದಿದೆ. ಕಾಂಗ್ರೆಸ್ ಸರ್ಕಾರ ವಾಪಾಸ್ ಪಡೆಯಲು ಮುಂದಾಗಿದೆ, ಇದೊಂದು ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಈ ಕಾಯ್ದೆ ವಾಪಾಸ್ ಪಡೆದರೇ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ್ಕೆ ನೀಡಿದರು.

lokesh

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

19 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

20 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

20 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

21 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

21 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 day ago