ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಕನಕಪುರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ರಾಮನಗರದ ಜನರು ಮತ್ತು ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿವಿ ಸ್ಥಳಾಂತರ ಮಾಡದಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ.
ಕನಕಪುರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹೆಚ್ಡಿ ಕುಮಾರಸ್ವಾಮಿ ಅವರ ಅವಧಿಯಲ್ಲೇ ಇದಕ್ಕೆ ಹಣ ಬಿಡುಗಡೆ ಆಗಿತ್ತು. ಟೆಂಡರ್ ಸಹ ಆಗಿ ನಿಂತಿತ್ತು. ಈಗ ರಾಜಕೀಯವಾಗಿ ಎತ್ತಿಕಟ್ಟುತ್ತಿದ್ದಾರೆ. ತೊಂದರೆಯಿಲ್ಲ. ಅವರ ಹೋರಾಟವನ್ನು ನಾನು ಸ್ವಾಗತ ಮಾಡುತ್ತೇನೆ ಎಂದರು.
ರಾಮನಗರದ ಬಹುನಿರೀಕ್ಷಿತ ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪನೆಗೆ ಆರಂಭದಿಂದಲೂ ಸಂಕಷ್ಟ ಎದುರಾಗುತ್ತಲೇ ಇದೆ. ಹಲವು ಬಾರಿ ಶಂಕುಸ್ಥಾಪನೆ ಆಗಿದ್ದರೂ ಅದರ ನಿರ್ಮಾಣ ಕಾರ್ಯ ನಡೆದಿಲ್ಲ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ವಿವಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿತ್ತು. ಬಳಿಕ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿಪೂಜೆ ನೆರವೇರಿಸಿದ್ದರು. ಇದೀಗ ಕಾಮಗಾರಿ ಆರಂಭವಾಗುವ ಹಂತದಲ್ಲೇ ವಿವಿ ಸ್ಥಳಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ.
ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ವಿವಿಧ ಸಂಘಟನೆಗಳು ಸ್ಥಳಾಂತರ ನಿರ್ಧಾರವನ್ನು ಖಂಡಿಸಿವೆ.
ಶತಾಯ ಗತಾಯ ಕನಕಪುರಕ್ಕೆ ಒಂದು ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋಗಬೇಕು ಎಂದು ಪಟ್ಟುಹಿಡಿದಿರುವ ಡಿಕೆ ಶಿವಕುಮಾರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಆಡಳಿತ ಕಚೇರಿಯನ್ನ ರಾಮನಗರದಲ್ಲಿ ನಿರ್ಮಿಸಿ, ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ರಾಮನಗರ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಬೇಕಿದ್ದ ಮೆಡಿಕಲ್ ಕಾಲೇಜು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನ ವಿರೋಧಿಸಿ ಪಕ್ಷಾತೀತ ಹೋರಾಟಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮೆಡಿಕಲ್ ಕಾಲೇಜು ಶಿಫ್ಟ್ ಆಗಬಾರದು, ಅವರದ್ದೇ ಸರ್ಕಾರ ಇರುವಾಗ ಕನಕಪುರಕ್ಕೆ ಹೊಸ ಕಾಲೇಜು ಮಂಜೂರು ಮಾಡಿಸಿಕೊಳ್ಳಿ ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…
ಪ್ರಕಾಶ್ ರಾಜ್ ಭಾರತದ ಚುನಾವಣಾ ಆಯೋಗ ಈಗ ಆಂತರಿಕ ಕ್ಷೋಭೆಯಲ್ಲಿ ಸಿಲುಕಿದೆ. ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ…