Siddaramaiah. Photo: PTI
ಮೈಸೂರು: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಂಗಳವಾರ (ಏ.2) ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕೂಲ್ ಆಗಿದ್ದೇನೆ ಅದಕ್ಕಾಗಿಯೇ ನನಗೆ ಯಾವುದೇ ಟೆನ್ಷನ್ ಇಲ್ಲ. ಇದು ಕೂಡಾ ನನ್ನ ಆರೋಗ್ಯದ ಒಂದು ಗುಟ್ಟು. ಜನರು ಪ್ರೀತಿಯಿಂದ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಾನು ನಿವೃತ್ತಿ ಹೊಂದುವುದಾಗಿ ತೀರ್ಮಾನಿಸಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವರ್ಷ ವಯಸ್ಸಾಗಲಿದೆ. ಆನಂತರ ರಾಜಕೀಯದಲ್ಲಿ ಉತ್ಸಾಹ ಇರುವುದಿಲ್ಲ. ಜೊತೆಗೆ ನನ್ನ ದೇಹದ ಸ್ಥಿತಿ ಹೇಗಿರುತ್ತದೆ ಎಂಬುದು ನನಗೆ ಮಾತ್ರ ಗೊತ್ತಿದ್ದು, ಈ ಎಲ್ಲಾ ಕಾರಣದಿಂದಾಗಿ ರಾಜಕೀಯದಿಂದ ನಿವೃತ್ತಿ ಹೊಂದಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಇನ್ನು ರಾಜ್ಯ ರಾಜಧಾನಿಯಲ್ಲಿ ಬರಗಾಲದಿಂದಾಗಿ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಯಾವ ಹಣದ ಸಮಸ್ಯೆ ಇಲ್ಲ. ಒಂದೆರಡು ಕಡೆ ಸಮಸ್ಯೆ ಇದ್ದರು ಅದನ್ನು ಬಗೆ ಹರಿಸುವಂತೆ ಹೇಳಿದ್ದೇನೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರ ಸಂಬಂಧ ಅಧಿಕಾರಿಗಳ ಸಭೆ ನಡೆಸಲು ಸಾಧ್ಯವಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…