ನಿನ್ನೆ ( ನವೆಂಬರ್ 21 ) ಐಸಿಸಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸಂಬಂಧಿಸಿದಂತೆ ಬೃಹತ್ ನಿರ್ಧಾರವೊಂದನ್ನು ಪ್ರಕಟಿಸಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳು ಪಾಲ್ಗೊಳ್ಳುವುದನ್ನು ನಿಷೇಧಿಸಿ ಐಸಿಸಿ ಆದೇಶ ಹೊರಡಿಸಿದೆ. ಇದರಿಂದ ಇದೀಗ ಮಹಿಳಾ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದ ತೃತೀಯ ಲಿಂಗಿ ಕ್ರಿಕೆಟರ್‌ಗಳಿಗೆ ಹಿನ್ನಡೆ ಉಂಟಾಗಿದೆ.
ತೃತೀಯ ಲಿಂಗಿ ಕ್ರಿಕೆಟರ್‌ಗಳು ಲಿಂಗ ಪರಿವರ್ತನೆ ಮಾಡಿಸಿಕೊಂಡಿರಲಿ, ಲಿಂಗ ಮರುಜೋಡಣೆ ಮಾಡಿಸಿಕೊಂಡಿರಲಿ ಅಥವಾ ಇದ್ಯಾವುದನ್ನೂ ಮಾಡಿಸಿಕೊಳ್ಳದೇ ಇರಲಿ, ಹೇಗಿದ್ದರೂ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾಗವಹಿಸುವಂತಿಲ್ಲ ಎಂಬ ಹೊಸ ನಿಯಮ ಇದೀಗ ಜಾರಿಗೆ ಬಂದಿದೆ. ಮಹಿಳಾ ಕ್ರಿಕೆಟಿಗರ ಸಮಗ್ರತೆ ಕಾಪಾಡಲು ಹಾಗೂ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿಯಮ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಾತ್ರ ಅನ್ವಯಿಸಲಿದ್ದು, ದೇಶಿ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳನ್ನು ಮಹಿಳಾ ಕ್ರಿಕೆಟ್ ಆಡಲು ಬಿಡುವುದು ಆಯಾ ಕ್ರಿಕೆಟ್ ಮಂಡಳಿಗಳಿಗೆ ಬಿಟ್ಟ ವಿಚಾರ ಎಂದು ಐಸಿಸಿ ಹೇಳಿದೆ.
ಹೀಗೆ ಐಸಿಸಿ ಹೊಸ ನಿಯಮ ಜಾರಿಗೊಳಿಸುತ್ತಿದ್ದಂತೆ ಜಗತ್ತಿನ ಮೊದಲ ತೃತೀಯ ಲಿಂಗಿ ಕ್ರಿಕೆಟರ್ ಡೇನಿಯಲ್ ಮೆಕ್‌ಗಾಹೆ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಮೆಕ್‌ಗಾಹೆ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಕೆನಡಾ ದೇಶದ ಪರ ಆಡುತ್ತಿದ್ದರು.
ಇನ್ನು ಐಸಿಸಿಯ ಈ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ನೆಟ್ಟಿಗರು ಇದನ್ನು ಒಳ್ಳೆಯ ನಿರ್ಧಾರ ಎಂದು ಸ್ವಾಗತಿಸಿದ್ದಾರೆ. ಪುರುಷರ ಹಾಗೆ ಬಲ ಹೊಂದಿರುವ ತೃತೀಯ ಲಿಂಗಿಗಳು ಮಹಿಳಾ ಕ್ರಿಕೆಟ್‌ನಲ್ಲಿ ಆಡುವುದು ಉಳಿದ ಮಹಿಳಾ ಕ್ರಿಕೆಟರ್‌ಗಳಿಗೆ ಅನನುಕೂಲ ಉಂಟು ಮಾಡುವುದು ಖಚಿತ, ಹೀಗಾಗಿ ಇದು ಐಸಿಸಿಯ ಉತ್ತಮ ನಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…