ತಿರುವನಂತಪುರಂ : ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ನಡೆದಿರುವುದು ಐಇಡಿ ಬ್ಲಾಸ್ಟ್ ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇರುವ ಶಂಕೆ ದಟ್ಟವಾಗಿದೆ. ಕೇರಳ ಪೊಲೀಸ್ ಮಹಾನಿರ್ದೇಶಕ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಕಲಮಶ್ಯೇರಿಗೆ ತೆರಳಿದ್ದಾರೆ. ಎಲ್ಲಾ ಆಯಾಮಗಳಿಂದಲೂ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತದೆ ಎಂದು ಎಡಿಜಿಪಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.
ಶಂಕಿತರ ಸಾಮಾಜಿಕ ಜಾಲತಾಣಗಳ ಚಟುವಟಿಕೆ ಆಧರಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜೊತೆಗೆ ಈ ಸ್ಫೋಟ ಪೂರ್ವ ನಿಯೋಜಿತ ಕೃತ್ಯವೇ ಎಂಬುದನ್ನು ಖಚಿತಪಡಿಸಲು ರಾಜ್ಯ ಅಥವಾ ಕೇಂದ್ರ ಸಂಸ್ಥೆಗಳಿಗೆ ಯಾವುದೇ ವರದಿಗಳು ಬಂದಿಲ್ಲ ಎಂಬುದಾಗಿ ತಿಳಿದುಬಂದಿದೆ.
ಇತ್ತ ಗಾಯಾಳುಗಳ ಆರೋಗ್ಯ ವಿಚಾರಿದ ಬಳಿಕ ಜಿಲ್ಲಾಧಿಕಾರಿ ಎನ್‍ಎಸ್‍ಕೆ ಉಮೇಶ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 10 ಜನರನ್ನು ಕಲಮಶ್ಶೇರಿ ವೈದ್ಯಕೀಯ ಕಾಲೇಜಿನ ಸುಟ್ಟಗಾಯಗಳ ಘಟಕಕ್ಕೆ ದಾಖಲಿಸಲಾಗಿದೆ. ಅವರಲ್ಲಿ 50 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು 8 ಜನರನ್ನು ವೈದ್ಯಕೀಯ ಕಾಲೇಜಿನ ಸಾಮಾನ್ಯ ವಾರ್ಡ್‍ನಲ್ಲಿ ದಾಖಲಿಸಲಾಗಿದ್ದು, ಉಳಿದ 18 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.
ಮಂಡ್ಯ: ಪ್ರಾಜೆಕ್ಟ್ ವರ್ಕ್ ಜೊತೆಯಲ್ಲಿ ಪ್ರವಾಸ ಮಾಡಲೆಂದು ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಇಂದು ಸಚಿವ ಚಲುವರಾಯಸ್ವಾಮಿ…
ಬೆಂಗಳೂರು: ಭಾರತದ ರನ್ ಮೆಷಿನ್ ಎಂದು ಖ್ಯಾತಿ ಪಡೆದಿರುವ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬೆಂಗಳೂರಿನ ಒನ್…
ಮಂಡ್ಯ: ಸಾಹಿತ್ಯದ ಮೂಲಕ ರಾಜಕಾರಣವನ್ನು ಬದಲಾಯಿಸಲು ಸಾಧ್ಯವಿದೆ. ಆದರೆ ಸಾಹಿತ್ಯ ಕ್ಷೇತ್ರದಲ್ಲಿರುವವರು ರಾಜಕಾರಣಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಸಚಿವ ಎಚ್.ಕೆ.…
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಹಾಗೂ ಅಸಂವಿಧಾನಿಕ ಪದ…
ಮೈಸೂರು: ದಿನೇ ಬೀದಿ ನಾಯಿಗಳ ಕಾಟ ಜೋರಾಗಿದ್ದು, ಬೀದಿ ನಾಯಿಗಳ ಹಾವಳಿಯಿಂದ ಬಾಲಕಿಯೊಬ್ಬಳಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ನಡೆದಿದೆ. ಈ…