ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿದ್ದಾರೆ.
ಈ ಪ್ರಯುಕ್ತ ಟ್ವೀಟ್ ಮಾಡಿರುವ ಅವರು, ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ. ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ. ಈ ಋಣ ಸಂದಾಯಕ್ಕೆ ನನ್ನ ರಾಜಕೀಯ ಮುಡಿಪು. ಮಹಾಗುರುವಿಗೆ ನಮನಗಳು ಎಂದು ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ. ಈ ಹೋರಾಟಕ್ಕೆ ಬಾಬಾಸಾಹೇಬರ ಚಿಂತನೆಗಳು ನಮ್ಮ ಆಯುಧವಾಗಲಿ ಎಂದು ಹೇಳಿದ್ದಾರೆ.
ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು ಎಂಬ ಬಿ.ಆರ್.ಅಂಬೇಡ್ಕರರ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ. ಇದು ನಾನು ಬಾಬಾ ಸಾಹೇಬರಿಗೆ ಸಲ್ಲಿಸಿದ ಗೌರವವೂ ಹೌದು ಎಂದು ತಿಳಿಸಿದ್ದಾರೆ.
ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದು ಕರೆ ನೀಡಿದರು.
ನ್ಯೂ ಇಯರ್ ಸೆಲಬ್ರೇಷನ್ಗೆ ದಿನಗಣನೆ ಬೆಂಗಳೂರು: 2024ನ್ನು ಮುಗಿಸಿ 2025ನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿಯೇ ತುದಿಗಾಲಲ್ಲಿ ಕಾತರದಿಂದ ಕಾಯುತ್ತಿದೆ. ಸದ್ಯ…
ಬಾಗಲಕೋಟೆ: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಂಧಿಸಿ, ಫೇಕ್ ಎನ್ಕೌಂಟರ್ ಮಾಡುವ ಉದ್ದೇಶವಿತ್ತು ಎಂದೆನ್ನಿಸುತ್ತದೆ ಎಂದು ಕೇಂದ್ರ…
ಬೆಂಗಳೂರು: ಸಾರ್ವಜನಿಕರಿಗೆ ಪಿಎಫ್ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದು ಭಾರತ ಕ್ರಿಕೆಟ್ ತಂಡದ…
ಮಂಡ್ಯ: 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 66ವರ್ಷದ ಬಳಿಕ ಗಣಿನಾಡಿಗೆ ನುಡಿತೇರು…
ಬೆಳಗಾವಿ: ಚಳಿಗಾಳದ ಅಧಿವೇಶನ ಸಂದರ್ಭದಲ್ಲಿ ಪಂಚಮಶಾಲಿಗಳು ತಮ್ಮ ಮೀಸಲಾತಿಗಾಗಿ ಸುವರ್ಣ ಸೌಧದ ಹತ್ತಿರ ಹೋರಾಟ ಮಾಡುವಾಗ ಪೊಲೀಸರು ಲಾಠಿ ಚಾರ್ಜ್…
ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು…