BREAKING NEWS

ಬಿಜೆಪಿ ನಮ್ಮ ಬೇಡಿಕೆ ಈಡೇರಿಸದಿದ್ದರೇ ರೈತರ ಆಕ್ರೋಶ ಎದುರಿಸಲಿದೆ : ಜಗಜಿತ್ ಸಿಂಗ್ ದಲೈವಾಲ

ಬೆಂಗಳೂರು : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಮ್ಮ ರೈತ ವಿರೋಧಿ ನೀತಿಯನ್ನು ಬದಲಾಯಿಸದಿದ್ದರೆ ಬಿಜೆಪಿ ರೈತರ ಬಾರಿ ಆಕ್ರೋಶ ಎದುರಿಸಲಿದೆ ಎಂದು ಸಂಯುಕ್ತ ಕಿಸಾನ್ ಬೇಡ ಮೋರ್ಚಾ (ರಾಜಕೀಯತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಮ್ಮ ರೈತ ವಿರೋಧಿ ನೀತಿಯನ್ನು ಬದಲಾಯಿಸದಿದ್ದರೆ ಬಿಜೆಪಿ ರೈತರ ಬಾರಿ ಆಕ್ರೋಶ ಎದುರಿಸಲಿದೆ ಎಂದು ಎಚ್ಚರಿಕೆ ನೀಡಿದರು.

ದೇಶದ ರೈತರ ಬೆಂಬಲ ನಮಗಿದೆ, ನಾವು ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಛಲ ನಮ್ಮಲ್ಲಿದೆ.  ದಕ್ಷಿಣ ಭಾರತ ರಾಜ್ಯಗಳ ರೈತರು ಬೆಂಬಲಿಸಿ ಚಳುವಳಿಯನ್ನು ಪ್ರಬಲಗೊಳಿಸಿ, ರೈತಶಕ್ತಿಯನ್ನು ಹೆಚ್ಚಿಸಿ ಎಂದು ಕರೆ ನೀಡಿದರು.

ಎಂಎಸ್‌ಪಿ ಖಾತರಿ ಕಾನೂನಿಗೆ ಫೆಬ್ರವರಿ 13 ರಿಂದ 4 ಸ್ಥಳಗಳಲ್ಲಿ ನಮ್ಮ ಪ್ರತಿಭಟನೆ ನಡೆಯುತ್ತಿದ್ದು, 125 ದಿನಗಳಿಗೂ ಹೆಚ್ಚು ಕಾಲ ಸಾವಿರಾರು ರೈತರು ರಸ್ತೆಗಿಳಿದಿದ್ದಾರೆ, ಕೇಂದ್ರ ಸರ್ಕಾರ ಈಡೇರಿಸುವವರೆಗೆ ಈ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.

ನಮ್ಮ ಭಾಗದ ರೈತ ಸಮುದಾಯದ ಆಕ್ರೋಶದಿಂದ ಗ್ರಾಮೀಣ ಪ್ರದೇಶದಲ್ಲಿ 2019 ರ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ 71 ಲೋಕಸಭಾ ಸ್ಥಾನಗಳನ್ನು ಕಳೆದುಕೊಂಡಿದೆ ಎಂದು ಅವರು ಒತ್ತಿ ಹೇಳಿದರು.

ಹರಿಯಾಣ ಮತ್ತು ಮಹಾರಾಷ್ಟ್ರ ಸೇರಿದಂತೆ ಮುಂಬರುವ ಎಲ್ಲಾ ವಿಧಾನಸಭಾ ಚುನಾವಣಾ ರಾಜ್ಯಗಳಲ್ಲಿ ರೈತರ ಕೋಪ. ತೋರಿಸಲಾಗುವುದು ಜುಲೈ 8 ರಂದು ಎಸ್‌ಕೆಎಂ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ವತಿಯಿಂದ ಬಿಜೆಪಿಯ 240 ಸಂಸದರನ್ನು ಹೊರತುಪಡಿಸಿ ಎಲ್ಲಾ ಸಂಸತ್ ಸದಸ್ಯರಿಗೆ ತಮ್ಮ 12 ಬೇಡಿಕೆಗಳ ಕುರಿತು ಜ್ಞಾಪಕ ಪತ್ರವನ್ನು ನೀಡಲಿದೆ ಎಂದರು .

ಜುಲೈ ತಿಂಗಳಲ್ಲಿ ಎರಡು ವೇದಿಕೆಗಳಲ್ಲಿ ದೆಹಲಿಯಲ್ಲಿ ಬೃಹತ್ ರೈತ ಸಮಾವೇಶವನ್ನು ಆಯೋಜಿಸಲಿವೆ ಎಂದು ಹೇಳಿದರು. ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬಲಪಡಿಸಲು ದಕ್ಷಿಣ ಭಾರತದ ರೈತರು ಜೂನ್ 24 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಸಮಾವೇಶವನ್ನು ಆಯೋಜಿಸಿದ್ದರು ಎಂದು ಹೇಳಿದರು. ಎಸ್‌ಕೆಎಂ (ರಾಜಕೀಯೇತರ) ಸೆಪ್ಟೆಂಬರ್‌ನಲ್ಲಿ ಹರಿಯಾಣದಲ್ಲಿ ರೈತ ರ್ಯಾಲಿಯನ್ನು ಆಯೋಜಿಸುತ್ತಿದ್ದು, ಇದರಲ್ಲಿ ಎಲ್ಲಾ ರಾಜ್ಯಗಳಿಂದ 1 ಲಕ್ಷಕ್ಕೂ ಹೆಚ್ಚು ರೈತರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ಸಂಚಾಲಕ, ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಮಾತನಾಡಿ,  ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದ ತಕ್ಷಣ ರೈತರಿಗೆ ಲಾಭವಿಲ್ಲ ರೈತರ ಕಣ್ಣಿಗೆ ಮಣ್ಣಿರಚಬಾರದು .ರೈತರು ಕೇಳುತ್ತಿರುವುದು ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಅದಕ್ಕಾಗಿಯೇ ನಮ್ಮ ಹೋರಾಟ. ಒಡಿಸ್ಸಾ ಮತ್ತು ಛತ್ತೀಸ್ಗಡ ರಾಜ್ಯಗಳು ಭತ್ತಕ್ಕೆ 3100 ಪ್ರೋತ್ಸಾಹ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ 2300. ಬೆಂಬಲ ಬೆಲೆ ನಿಗದಿ ಮಾಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಬರಗಾಲದಿಂದ ರೈತರು ತತ್ತರಿಸಿದ್ದರು ಸೂಕ್ತ ಪರಿಹಾರ ಸಿಕ್ಕಿಲ್ಲ ಆದರೆ ತೆಲಂಗಾಣ ಸರ್ಕಾರ ರೈತರ 2 ಲಕ್ಷ ಸಾಲ ಮನ್ನಾ ಮಾಡಿದೆ.ಪ್ರತಿ ಎಕರೆಗೆ ವರ್ಷಕ್ಕೆ 15ಸಾವಿರ ಪ್ರೋತ್ಸಾಹದನ ನೀಡುತ್ತಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ತೀವ್ರ ಬರಗಾಲವಾಗಿದ್ದರು ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಹಣ 4 ಸಾವಿರ ನಿಲ್ಲಿಸಿದ್ದಾರೆ. ಇದು ರಾಜ್ಯ ಸರ್ಕಾರ ರೈತರಿಗೆ ಬಗೆದ ದ್ರೋಹವಾಗಿದೆ ಎಂದರು.

ರೈತರ ಹೆಸರಿನಲ್ಲಿ ಹಾಲು ದರ ಹೆಚ್ಚಳ ಮಾಡುತ್ತಿದ್ದಾರೆ ಆದರೆ ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ರೂ. 5 ಪ್ರೋತ್ಸಾಹ ಧನ ಸುಮಾರು 700 ಕೋಟಿ 8 ತಿಂಗಳಿಂದ ಬಿಡುಗಡೆ ಮಾಡಿಲ್ಲ ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಲಿ. ಸರ್ಕಾರಗಳ ಕೃತಕ ನೀತಿಯಿಂದ ಸ್ವಾಭಾವಿಕ ಪ್ರಕೃತಿ ನಾಶದ ಹಂಚಿನಲ್ಲಿದ್ದು ಹವಾಮಾನ ವೈಪರಿತ್ಯ ಕೃಷಿ ಕ್ಷೇತ್ರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಈ ದಿಕ್ಕಿನಲ್ಲಿ ರೈತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಹರಿಯಾಣ ರಾಜ್ಯದ ರೈತ ಮುಖಂಡ ಅಭಿಮನ್ಯುಕೊಹರ್ ಮಾತನಾಡಿ, ಚಳುವಳಿ ನಿರತ ರೈತರ ತಾಳ್ಮೆ ಪರೀಕ್ಷೆ ಮಾಡುವುದು ಬೇಡ ಎಂದು ಎಚ್ಚರಿಕೆ ನೀಡಿದರು.

ಕೇರಳ ರಾಜ್ಯದ ಕೆ ವಿ ಬಿಜು ಮಾತನಾಡಿ, ಕೇಂದ್ರ ಸರ್ಕಾರ ಅಡುಗೆಗೆ ಬಳಸುವ ಪಾಮ್ ಅಯಿಲ್ ಅಂಡ್ ಸೋಯಾಬಿನ್ ಆಯಿಲ್ ಎಣ್ಣೆಯ ಆಮದು ತೆರಿಗೆಯನ್ನು ಶೇಕಡ 5.5ಕ್ಕೆ ಇಳಿಕೆ ಮಾಡಿದ ಪರಿಣಾಮ, ತೆಂಗು ಬೆಳೆಗಾರರು ಸಂಕಷ್ಟ ಪಡುವಂತಾಗಿದೆ ಆದಾನಿ ಮಾಲಿಕತ್ವದ ಕಂಪನಿ ಈ ಎಣ್ಣೆಯನ್ನು ಹೆಚ್ಚು ಆಮದು ಮಾಡಿಕೊಳ್ಳುತ್ತಿದೆ. ಇದು ರೈತರ ಪಾಲಿಗೆ ದೊಡ್ಡ ಸಂಕಷ್ಟ ಸೃಷ್ಟಿ ಮಾಡಿದೆ ಎಂದರು.

ತಮಿಳುನಾಡಿನ ರೈತ ಮುಖಂಡ ಪಿಆರ್ ಪಾಂಡ್ಯನ್ ಮಾತನಾಡಿ ಕೇಂದ್ರ ಸರ್ಕಾರ ನಾಲ್ಕು ಸಭೆಗಳನ್ನು ನಡೆಸಿ ಯಾವುದೇ ತೀರ್ಮಾನ ಕೈಗೊಳ್ಳದೆ ನಾಟಕವಾಡಿದೆ ದಕ್ಷಿಣ ಭಾರತ ರಾಜ್ಯಗಳ ಕಬ್ಬು .ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಯಾವುದೇ ಗಂಭೀರ ಚಿಂತನೆ ನಡೆಸಿಲ್ಲ ಎಂದು ತಿಳಿಸಿದರು.

ನವದೆಹಲಿಯ ಸುಜೀತ್‌ ಸಿಂಗ್ ಮಾತನಾಡಿ, ಸ್ವಾತಂತ್ರ ಹೋರಾಟದ ಮಾದರಿಯಲ್ಲಿ ಶಾಂತಿಯುತ ರೈತ ಹೋರಾಟ ನಡೆಯುತ್ತಿದೆ ಸರ್ಕಾರ ಯಾವುದೇ ಅಸ್ತ್ರಬಳಸಿದರು ನಾವು ಎದೆಗುಂದುವ ಪ್ರಶ್ನೆಯೇ ಇಲ್ಲ ರೈತ ಹೋರಾಟವನ್ನು ಲಘುವಾಗಿ ಕಾಣುವವರಿಗೆ ತಕ್ಕ ಪಾಠ ಕಲಿಸುತ್ತೇವೆ . ರೈತರು ವ್ಯವಸಾಯ ನಿಲ್ಲಿಸಿದರೆ ದೇಶದಲ್ಲಿ ಹಸಿವಿಗಾಗಿ ಕ್ರಾಂತಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ರೈತ ಸಂಘದ ಗೋವಿಂದ ರೆಡ್ಡಿ, ಹತ್ತಳ್ಳಿ ದೇವರಾಜ್ ಗಜೇಂದ್ರ ಸಿಂಗ್ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

15 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

15 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago