ಬೆಂಗಳೂರು: ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎನ್ನುವ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಕಬ್ಬಿಣದಿಂದ ಸೂಜಿ ಮತ್ತು ಕತ್ತರಿ ತಯಾರಿಸಬಹುದು. ಕಾಂಗ್ರೆಸ್ ಸೂಜಿಯಿಂದ ಹೊಲಿಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿಯವರು ಕತ್ತರಿಯಿಂದ ಕತ್ತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
“ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಹಾಡನ್ನು ನಾಡಗೀತೆಯಾಗಿ ಘೋಷಣೆ ಮಾಡಿದೆವು. ಈ ಹಾಡೇ ಕಾಂಗ್ರೆಸ್ ಪಕ್ಷ ಕರ್ನಾಟಕಕ್ಕೆ ನೀಡಿರುವ ಸಂದೇಶ.” “ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುವುದೇ ನಮ್ಮ ಗುರಿ ಹಾಗೂ ಉದ್ದೇಶ. ಬಿಜೆಪಿಯವರು ಸತ್ಯಶೋಧನ ಸಮಿತಿಯ ಮೂಲಕ ಅವರಿಗೆ ಏನು ಬೇಕೋ ಅದನ್ನು ಹೇಳುತ್ತಿದ್ದಾರೆ. ನಾವು ಸಮಾಜ ಜೋಡಿಸುತ್ತಿದ್ದರೆ, ಅವರು ಒಡೆಯುತ್ತಿದ್ದಾರೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಹಿಂದೂ ಮತ್ತು ಮುಸ್ಲಿಂ ಇಬ್ಬರನ್ನೂ ಭೇಟಿ ಮಾಡಿ ಮಾತನಾಡಿದ್ದಾರೆ. ಅವರ ಸಮಸ್ಯೆ ಆಲಿಸಿದ್ದಾರೆ. ಯಾರು ತಪ್ಪು ಕೆಲಸ ಮಾಡಿದ್ದಾರೋ, ಅದನ್ನು ಖಂಡಿಸಿದ್ದಾರೆ, ಇಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಮೇಯ ಬರುವುದೇ ಇಲ್ಲ. ಯಾರು ಕಾನೂನು ಮೀರಿ ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ನೀಡುವ ಕೆಲಸ ಮಾಡುತ್ತೇವೆ. ಆದರೆ ಬಿಜೆಪಿಯವರು ಪಟ್ಟಿ ಇಟ್ಟುಕೊಂಡು ಕೆಲವರ ಮನೆಗೆ ಹೋಗಿದ್ದಾರೆ ಎಂದು ಆರೋಪಿಸಿದ ಶಿವಕುಮಾರ್,ನಾವು ನಿಜವಾದ ಹಿಂದುಗಳು, ಬಿಜೆಪಿಯವರು ನಕಲಿ ಹಿಂದುಗಳು ಎನ್ನುವ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…