Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ನಾನು ಭ್ರಷ್ಟ ಆಗಿದ್ದರೆ ಮತ್ಯಾರು ಪ್ರಮಾಣಿಕರು ಇಲ್ಲ : ಕೇಜ್ರಿವಾಲ್‌

ದೆಹಲಿ : ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿಮಾಡಿದ ಬೆನ್ನಲ್ಲೇ ಗರಂ ಆಗಿರುವ ಅವರು ಭಾನುವಾರ ನಾನು ಸಿಬಿಐ ಮುಂದೆ ಹಾಜರಾಗಲಿದ್ದೇನೆ ಎಂದು ಹೇಳಿದ್ದಾರೆ.
ಒಂದು ವೇಳೆ ನಾನು ಭ್ರಷ್ಟಾಚಾರಿಯಾಗಿದ್ದರೆ, ಈ ಜಗತ್ತಿನಲ್ಲಿ ಮತ್ಯಾರು ಪ್ರಮಾಣಿಕರು ಇಲ್ಲವೇ ಇಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ 75 ವರ್ಷಗಳ ಇತಿಹಾಸದಲ್ಲಿ ಯಾವುದೇ ಒಂದು ರಾಜಕೀಯ ಪಕ್ಷ ಎಎಪಿ ಅಷ್ಟು ಗುರಿಯಾಗಿಲ್ಲ. ಏಕೆಂದರೆ ದೇಶದ ಜನಸಾಮಾನ್ಯರಿಗೆ ಏಕೈಕ ಆಶಾಕಿರಣ ನಮ್ಮ ಎಎಪಿ. ಹೀಗಾಗಿ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನಾಯಕರು ನನ್ನನ್ನು ಬಂಧನ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ನನ್ನ ಬಂಧನ ಆದರೆ, ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿಗೆ ತಿವಿದಿದ್ದಾರೆ.ಕೇಜ್ರಿವಾಲ್ ಅವರಿಗೆ ಏಪ್ರಿಲ್‌ 16 ಭಾನುವಾರ 11 ಗಂಟೆಗೆ ಸಿಬಿಐನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದೆಹಲಿ ಮಾಜಿ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಇದೀಗ ಈ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿದೆ.

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡುವ ಸಲುವಾಗಿ ದೆಹಲಿ ಸರ್ಕಾರ ‘ಅಬಕಾರಿ ನೀತಿ 2020–22 ಅನ್ನು ಜಾರಿಗೊಳಿಸಿದ್ದು, ಇದರಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಆರೋಪವನ್ನು ಆಪ್‌ ಸರ್ಕಾರ ಬಲವಾಗಿ ವಿರೋಧಿಸಿತ್ತು. ನಂತರ ಈ ನೀತಿಯನ್ನು ರದ್ದುಗೊಳಿಸಲಾಗಿತ್ತು. ನಮ್ಮ ಸರ್ಕಾರದ ಅಭಿವೃದ್ದಿ ಕೆಲಸಗಳನ್ನು ಕಂಡು ತಾಳಲಾರದೆ ಕೇಂದ್ರ ಬಿಜೆಪಿ ಸರ್ಕಾರ ಆಪ್‌ ನಾಯಕರನ್ನು ಜೈಲಿಗಟ್ಟಿದೆ ಎಂದು ಎಎಪಿ ಆರೋಪಿಸಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ