BREAKING NEWS

ನನ್ನ ಸಿಎಂ ಮಾಡಿದ್ರೆ ಸಿದ್ದು ಸವಾಲು ಎದುರಿಸುತ್ತೇನೆ : ಲೋಕಸಭೆ ಚುನಾವಣೆಯಲ್ಲಿ 20 ಸೀಟ್‌ ಗೆಲ್ಲಿಸುತ್ತೇನೆ

ನವದೆಹಲಿ : ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಿದ್ದರಾಮಯ್ಯನವರ ಎಲ್ಲ ಸವಾಲುಗಳನ್ನು ನಾನು ಎದುರಿಸುತ್ತೇನೆ. ಜೊತೆಗೆ 2024ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಿಸಿ ಕೊಡುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದು ಈಗಾಗಲೇ ಮೂರ್ನಾಲ್ಕು ದಿನಗಳಾದರೂ ಮುಖ್ಯಮಂತ್ರಿ ಆಯ್ಕೆ ಮಾಡುವಲ್ಲಿ ಹೈಕಮಾಂಡ್‌ಗೆ ಸಾಧ್ಯವಾಗಿಲ್ಲ. ಸಿಎಂ ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಕರೆಸಿ ಹೈಕಮಾಂಡ್‌ ನಾಯಕರು ಚರ್ಚೆ ಮಾಡಿದರೂ, ಸಂಧಾನ ಮಾಡಿದರೂ ಯಾವುದೇ ಮಾತುಕತೆ ಸಫಲವಾಗಿಲ್ಲ. ಇಂದು ಮಧ್ಯಾಹ್ನ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ಮಾಡಿದ ಡಿ.ಕೆ.ಶಿವಕುಮಾರ್ ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ಮುಂದಿನದ್ದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ 20 ಸ್ಥಾನ ಗೆಲ್ಲಿಸಿಕೊಡುತ್ತೇನೆ : ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದನ್ನು ಒಪ್ಪಲು ಸಾಧ್ಯವೇ ಇಲ್ಲ. ನಾನು ಮುಖ್ಯಮಂತ್ರಿ ಯಾದರೆ ಸಿದ್ದರಾಮಯ್ಯ ಅವರ ಸವಾಲುಗಳನ್ನು ಎದುರಿಸುತ್ತೇನೆ. ಪಕ್ಷದ ಒಬ್ಬನೇ ಒಬ್ಬ ಶಾಸಕ ಪಕ್ಷ ತೊರೆಯದಂತೆ ನೋಡಿಕೊಳ್ಳುತ್ತೇನೆ. ನನ್ನ ಮೇಲಿನ ಕೇಸ್ ಗಳು ಸುಪ್ರೀಂ ಕೋರ್ಟ್‌ನಲ್ಲಿವೆ. ಇದರಿಂದ ಪಕ್ಷಕ್ಕೆ ಯಾವುದೇ ಮುಜುಗರ ಆಗಲ್ಲ. ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲಿಸಿ ಕೊಡುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಅವರು ರಾಹುಲ್‌ಗಾಂಧಿ ಮುಂದೆ ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಈ ವೇಳೆಯೂ ಸಂಧಾನ ಮಾತುಕತೆ ವಿಫಲವಾಗಿದ್ದು, ಪ್ರಿಯಾಂಕ್ ಖರ್ಗೆ ಅವರು ಕರ್ನಾಟಕ ಮುಖ್ಯಮಂತ್ರಿ ಆಯ್ಕೆಗೆ ಚರ್ಚೆ ನಡೆಸಲು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ‌

ನನಗೆ ಮೊದಲು ಅವಕಾಶ ಕೊಡಿ : ಮುಖ್ಯಮಂತ್ರಿ ಸ್ಥಾನಕ್ಕಾಗಿ ಚರ್ಚೆ ನಡೆಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಡಿ.ಕೆ. ಶಿವಕುಮಾರ್‌ ತೀವ್ರವಾಗಿ ಅಸಮಧಾನಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಅಸಮಧಾನ ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಸಮಯದಿಂದ ಮಾತುಕತೆ ನಡೆಸಿದ ಬಳಿಕ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಒಪ್ಪಿಕೊಂಡಿದ್ದಾರಂತೆ. ಆದರೆ, ಮುಖ್ಯಮಂತ್ರಿ ಆಗುವ ಅವಕಾಶವನ್ನು ಮೊದಲು ನನಗೆ ನೀಡಬೇಕು ಎಂದು ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದಿದ್ದಾರಂತೆ. ಹೈಕಮಾಂಡ್‌ ಹೇಳಿದಂತೆ ನಾನು ಕೇಳ್ತೀನಿ ಆದರೆ, ಮೊದಲು ಸಿಎಂ ಆಗುವ ಅವಕಾಶ ನನಗೆ ಕೊಡಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಪ್ರಿಯಾಂಕಾ ಗಾಂಧಿ ಎಂಟ್ರಿ : ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಏರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಇದ್ದು, ಪಕ್ಷದ ಯಾವ ವರಿಷ್ಠರೂ ಮಾತುಕತೆ ನಡೆಸಿದರೂ ಇಬ್ಬರೂ ನಾಯಕರ ಮನವೊಲಿಕೆ ಸಾಧ್ಯವಾಗುತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ರಾಹುಲ್ ಗಾಂಧಿ ಸಹಿತ ಯಾರು ಮಾತುಕತೆ ನಡೆಸಿದರೂ ಡಿಕೆಶಿ ಮತ್ತು ಸಿದ್ದರಾಮಯ್ಯ ಸಿಎಂ ಹುದ್ದೆ ತನಗೇ ಬೇಕೆಂದು ರಚ್ಚೆ ಹಿಡಿದು ಕುಳಿತಿದ್ದಾರೆ. ಇದೀಗ ಈ ಸಮಸ್ಯೆ ಬಗೆಹರಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಬ್ಬರ ಜೊತೆಗೆ ಮಾತುಕತೆಗೆ ಪ್ರಿಯಾಂಕ ಗಾಂಧಿ ಒಪ್ಪಿದ್ದಾರೆ. ಉಭಯ ನಾಯಕರ ಜೊತೆಗೆ ಮಾತುಕತೆ ಮಾಡಲು ಪ್ರಿಯಾಂಕಾ ಒಪ್ಪಿಗೆ ಸೂಚಿಸಿದ್ದು, ರಾಹುಲ್ ಗಾಂಧಿಗೆ ಈ ಬಗ್ಗೆ ಪ್ರಿಯಾಂಕ ತಿಳಿಸಿದ್ದಾರೆ. ಡಿಕೆಶಿ ಮನವೊಲಿಕೆಗೆ ಮುಂದಾಗ್ತಾರಾ ಪ್ರಿಯಾಂಕಾ ಎಂಬುದನ್ನು ಕಾದು ನೋಡಬೇಕಿದೆ.

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

2 hours ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

2 hours ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

2 hours ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

13 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

14 hours ago