BREAKING NEWS

ಇದೊಮ್ಮೆ ಟಿಕೆಟ್ ಕೊಟ್ಟಿದ್ದರೆ ರಾಜಕೀಯ ನಿವೃತ್ತಿಗೂ ಸಿದ್ಧವಿದ್ದೆ : ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ : ಇದೊಂದು ಬಾರಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಸ ನೀಡಿದ್ದರೆ ನಂತರದ ದಿನಗಳಲ್ಲಿ ರಾಜಕೀಯ ಸನ್ಯಾಸಕ್ಕೂ ಸಿದ್ಧವಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡ ನಂತರ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್, ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನಾನು ಕಾಂಗ್ರೆಸ್​ಗೆ ಸೇರ್ಪಡೆಗೊಂಡ ತಕ್ಷಣ ಈ ಮೊದಲು ಸ್ಥಾನಮಾನ ನೀಡಿದ್ದ ಪಕ್ಷವನ್ನು ಬೈಯಬೇಕೆಂದೇನೂ ಇಲ್ಲ ಎಂದು ಹೇಳುವ ಮೂಲಕ ಬಿಜೆಪಿ ಬಗ್ಗೆ ಮೃಧುಧೋರಣೆ ವ್ಯಕ್ತಪಡಿಸಿದರು. ಬಿಜೆಪಿಯಲ್ಲಿ ಇರುವ ಕೆಲವರು ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ ಎಂದರು.
ನಾನು ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡಿಲ್ಲ. ಅಧಿಕಾರ ಬೇಕಾಗಿದ್ದರೆ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮಂತ್ರಿ ಸ್ಥಾನ ಬೇಡವೆಂದು ನಾನು ಹೇಳುತ್ತಿರಲಿಲ್ಲ. ಅನೇಕರು 9, 10 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದಿದ್ದಾರೆ. 80 ವರ್ಷ ಆದರೂ ಸಕ್ರಿಯ ರಾಜಕಾರಣದಲ್ಲಿ ಇದ್ದಾರೆ ಎಂದು ಹೇಳಿದರು.

ನನ್ನನ್ನು ಹಾಗೂ ನನ್ನ ಬೆಂಬಲಿಗರನ್ನು ಗೌರವದಿಂದ ಕಾಣುವಂತೆ ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದೇನೆ. ಇದನ್ನು ಹೊರತುಪಡಿಸಿ ಇನ್ನಾವುದೇ ಷರತ್ತು ಇಲ್ಲದೇ ಆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದರು.
ಏ. 19ರಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.

lokesh

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

3 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

3 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

3 hours ago