ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್‍ಗೆ ಬಂದರೆ ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಕಾಂಗ್ರೆಸ್‍ಗೆ ಬಂದರೆ ಸ್ವಾಗತ ಕೋರುತ್ತೇನೆ. ಆದರೆ ಅವರು ಈವರೆಗೂ ನನ್ನ ಜೊತೆ ಮಾತನಾಡಿಲ್ಲ. ಬಿಜೆಪಿಯಲ್ಲಿ ಅವರಿಗೆ ಟಿಕೆಟ್ ತಪ್ಪಿಸಿರುವುದು ನನಗೆ ಸಂಬಂಸಿದ್ದಲ್ಲ. ಅವರ ಅಂತರಿಕ ವಿದ್ಯಮಾನಗಳನ್ನು ನಾವ್ಯಾಕೆ ನೋಡಲು ಹೋಗೋಣ ಎಂದು ಪ್ರಶ್ನಿಸಿದರು.
ಜಗದೀಶ್ ಶೆಟ್ಟರ್ ಒಳ್ಳೆಯ ಮುಖಂಡ ಎಂಬುದರ ಬಗ್ಗೆ ಎರಡು ಮಾತಿಲ್ಲ. ಅವರು ಕಾಂಗ್ರೆಸ್‍ಗೆ ಬರುವ ಬಗ್ಗೆ ಮೊದಲು ತೀರ್ಮಾನ ಮಾಡಲಿ, ಬರದಿರುವ ಮೊದಲೇ ನಾನು ಹೇಗೆ ಸ್ವಾಗತ ಕೋರಲಿ ಎಂದರು.
ಬಿಜೆಪಿ ಜಗದೀಶ್, ಈಶ್ವರಪ್ಪ ಅವರಂತವರನ್ನು ಬಳಸಿ ಬಿಸಾಡುತ್ತಿದೆ. ಆ ಪಕ್ಷಕ್ಕೆ ಹಿರಿಯರ ಮೇಲೆ ಗೌರವ ಇಲ್ಲ. ಶೆಟ್ಟರ್ ಮಾಜಿ ಮುಖ್ಯಮಂತ್ರಿಯಾಗಿದ್ದವರು, ಹಿರಿಯ ನಾಯಕರು. ಕೆ.ಎಸ್.ಈಶ್ವರಪ್ಪ ಬಿಜೆಪಿ-ಆರೆಸ್‍ಸ್ ಪರವಾಗಿ ಅಷ್ಟೊಂದು ಮಾತನಾಡುತ್ತಿದ್ದರು. ಅವರಿಗೂ ಟಿಕೆಟ್ ತಪ್ಪಿಸುತ್ತಿದ್ದಾರೆ. ಪ್ರಭಾವಿ ನಾಯಕರನ್ನು ಬಳಸಿ ಈಗ ಮೂಲೆ ಗುಂಪು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…