ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬಂದರೆ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಕಳೆದುಕೊಳ್ಳಲಿದ್ದಾರೆ. ಬಿಜೆಪಿ ಮತ್ತೆ ಅಧಿಕಾರ ಹಿಡಿದರೇ ದೇಶದಲ್ಲಿ ಕೋಮುಗಲಭೆ ಸೃಷ್ಠಿಸಿ, ಮಕ್ಕಳು, ಪುರುಷರನ್ನು ಸಾಯುವಂತೆ ಮಾಡುತ್ತಾರೆ. ಒಬ್ಬರನ್ನೊಬ್ಬರು ಬಡಿದಾಡಿಕೊಂಡು ಸಾಯುವ ಹಾಗೆ ಮಾಡಿ, ಮಹಿಳೆಯರ ಮಂಗಳ ಸೂತ್ರವನ್ನು ಕಿತ್ತೊಗೆಯುತ್ತಾರೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.





