ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.
ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ ಎಂದು ಖಡಕ್ ಸಂದೇಶ ರವಾನಿಸಿದರು.
ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ. ನಮಗೆ ಯಾರ ಮುಲಾಜು ಇಲ್ಲ ಎಂದರು.
ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…