ತಿರುವನಂತಪುರಂ : ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್ ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಇಸ್ರೋ (ISRO) ಅಧ್ಯಕ್ಷ ಸೋಮನಾಥ್ ಹೇಳಿದ್ದಾರೆ.
ಚಂದ್ರಯಾನ-3 ಯಶಸ್ವಿಯಾದ ಬಳಿಕ ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು-ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಸೋಮನಾಥ್ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಕ್ರಂ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ಜಾಗಕ್ಕೆ ಶಿವಶಕ್ತಿ ಎಂದು ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆ ಸ್ಥಳಕ್ಕೆ ಹೆಸರಿಡುವ ಹಕ್ಕು ರಾಷ್ಟ್ರಕ್ಕೆ ಇದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ನಮಗೆಲ್ಲರಿಗೂ ಸರಿಹೊಂದುವ ರೀತಿಯಲ್ಲಿ ಶಿವಶಕ್ತಿ ಅರ್ಥವನ್ನು ವಿವರಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಚಂದ್ರಯಾನ–2 ಪತನವಾಗಿದ್ದ ಸ್ಥಳವನ್ನು ತಿರಂಗಾ ಪಾಯಿಂಟ್ ಎಂದು ಹೆಸರನ್ನು ಇರಿಸಿದ್ದಾರೆ. ಎರಡೂ ಭಾರತೀಯ ಧ್ವನಿಯ ಹೆಸರುಗಳಾಗಿವೆ. ನಾವು ಏನು ಮಾಡುತ್ತಿದ್ದೇವೆ ಎಂಬುದರ ಮಹತ್ವ ನಮಗೆ ತಿಳಿದಿರಬೇಕು ಎಂದು ಹೇಳಿದರು.
ನಾನೊಬ್ಬ ಅನ್ವೇಷಕ. ನಾನು ಚಂದ್ರನನ್ನು ಅನ್ವೇಷಿಸುತ್ತೇನೆ. ಆಂತರಂಗದ ಜಾಗವನ್ನು ಅನ್ವೇಷಿಸುತ್ತೇನೆ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ. ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮ. ನಾನು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ ಮತ್ತು ಅನೇಕ ಗ್ರಂಥಗಳನ್ನು ಓದುತ್ತೇನೆ. ಈ ಬ್ರಹ್ಮಾಂಡದಲ್ಲಿ ನಮ್ಮ ಅಸ್ತಿತ್ವ ಮತ್ತು ನಮ್ಮ ಪ್ರಯಾಣದ ಅರ್ಥವನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತೇನೆ. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಹೊರಗಡೆ ವಿಜ್ಞಾನ ಮಾಡಿದರೆ ಅಂತರಂಗಕ್ಕೆ ದೇವಸ್ಥಾನಗಳಿಗೆ ಬರುತ್ತೇನೆ ಎಂದು ಹೇಳಿದರು.
ಮಿಷನ್‌ನ ಪ್ರಸ್ತುತ ಸ್ಥಿತಿಯ ಬಗ್ಗೆ ಕೇಳಿದ್ದಕ್ಕೆ, ಎಲ್ಲವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಚಂದ್ರಯಾನ 3, ಲ್ಯಾಂಡರ್, ರೋವರ್ ತುಂಬಾ ಆರೋಗ್ಯಕರವಾಗಿದ್ದು, ಬೋರ್ಡ್‌ನಲ್ಲಿರುವ ಎಲ್ಲಾ ಐದು ಉಪಕರಣಗಳನ್ನು ಸ್ವಿಚ್ ಆನ್ ಮಾಡಲಾಗಿದೆ. ಇವುಗಳು ಸುಂದರವಾದ ಡೇಟಾವನ್ನು ನೀಡುತ್ತಿದೆ. ಇನ್ನೂ ಹತ್ತು ದಿನಗಳು ಉಳಿದಿವೆ. ವಿವಿಧ ವಿಧಾನಗಳ ಸಂಪೂರ್ಣ ಸಾಮರ್ಥ್ಯದೊಂದಿಗೆ ನಾವು ಎಲ್ಲಾ ಪ್ರಯೋಗಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ತಿಳಿಸಿದರು.
ಮೈಸೂರು: ಇತಿಹಾಸವಿರುವ ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ಹೋರಾಟ ಮಾಡುತ್ತೇವೆ ಶತಸಿದ್ದ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…
ಬೆಂಗಳೂರು: ನಮ್ಮದು ಜನಪರ ಹೋರಾಟ, ನಮ್ಮ ಹೋರಾಟಕ್ಕೆ ಯಾರೇ ಬೆಂಬಲ ನೀಡಿದರೂ ಸ್ವಾಗತ ಮಾಡುತ್ತೇವೆ ಎಂದು ಬಿಜೆಪಿಯ ರೆಬಲ್ ಶಾಸಕ…
ಹೊಸದಿಲ್ಲಿ: ಎರಡು ಒಲಿಂಪಿಕ್‌ನಲ್ಲಿ ಪದಕ ಗೆದ್ದ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಡಿ.ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳಿಗೆ…
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಗೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೂ ಮೊದಲೇ ಕ್ಲೀನ್…
ಮೈಸೂರು: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ.7 ರಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು…
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ‘ಕೆಆರ್‌ಎಸ್ ರಸ್ತೆಗೆ ಯಾವುದೇ ಅಧಿಕೃತ ಹೆಸರಿನ ಉಲ್ಲೇಖವಿಲ್ಲ’ ಎಂದು ಹೇಳಿದ್ದಾರೆ. ಆದರೆ ಅಧಿಕೃತವಾಗಿ…