BREAKING NEWS

ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ : ಇಸ್ರೋ ಅಧ್ಯಕ್ಷ ಸೋಮನಾಥ್‌

ತಿರುವನಂತಪುರಂ : ವಿಕ್ರಂ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್‌ ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಇಸ್ರೋ (ISRO) ಅಧ್ಯಕ್ಷ ಸೋಮನಾಥ್‌ ಹೇಳಿದ್ದಾರೆ.

ಚಂದ್ರಯಾನ-3 ಯಶಸ್ವಿಯಾದ ಬಳಿಕ ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು-ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಸೋಮನಾಥ್‌ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಕ್ರಂ ಲ್ಯಾಂಡರ್‌ ಚಂದ್ರನನ್ನು ಸ್ಪರ್ಶಿಸಿದ ಜಾಗಕ್ಕೆ ಶಿವಶಕ್ತಿ ಎಂದು ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆ ಸ್ಥಳಕ್ಕೆ ಹೆಸರಿಡುವ ಹಕ್ಕು ರಾಷ್ಟ್ರಕ್ಕೆ ಇದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ನಮಗೆಲ್ಲರಿಗೂ ಸರಿಹೊಂದುವ ರೀತಿಯಲ್ಲಿ ಶಿವಶಕ್ತಿ ಅರ್ಥವನ್ನು ವಿವರಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಚಂದ್ರಯಾನ–2 ಪತನವಾಗಿದ್ದ ಸ್ಥಳವನ್ನು ತಿರಂಗಾ ಪಾಯಿಂಟ್‌ ಎಂದು ಹೆಸರನ್ನು ಇರಿಸಿದ್ದಾರೆ. ಎರಡೂ ಭಾರತೀಯ ಧ್ವನಿಯ ಹೆಸರುಗಳಾಗಿವೆ. ನಾವು ಏನು ಮಾಡುತ್ತಿದ್ದೇವೆ ಎಂಬುದರ ಮಹತ್ವ ನಮಗೆ ತಿಳಿದಿರಬೇಕು ಎಂದು ಹೇಳಿದರು.

ನಾನೊಬ್ಬ ಅನ್ವೇಷಕ. ನಾನು ಚಂದ್ರನನ್ನು ಅನ್ವೇಷಿಸುತ್ತೇನೆ. ಆಂತರಂಗದ ಜಾಗವನ್ನು ಅನ್ವೇಷಿಸುತ್ತೇನೆ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ. ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮ. ನಾನು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ ಮತ್ತು ಅನೇಕ ಗ್ರಂಥಗಳನ್ನು ಓದುತ್ತೇನೆ. ಈ ಬ್ರಹ್ಮಾಂಡದಲ್ಲಿ ನಮ್ಮ ಅಸ್ತಿತ್ವ ಮತ್ತು ನಮ್ಮ ಪ್ರಯಾಣದ ಅರ್ಥವನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತೇನೆ. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಹೊರಗಡೆ ವಿಜ್ಞಾನ ಮಾಡಿದರೆ ಅಂತರಂಗಕ್ಕೆ ದೇವಸ್ಥಾನಗಳಿಗೆ ಬರುತ್ತೇನೆ ಎಂದು ಹೇಳಿದರು.

ಮಿಷನ್‌ನ ಪ್ರಸ್ತುತ ಸ್ಥಿತಿಯ ಬಗ್ಗೆ ಕೇಳಿದ್ದಕ್ಕೆ, ಎಲ್ಲವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಚಂದ್ರಯಾನ 3, ಲ್ಯಾಂಡರ್, ರೋವರ್ ತುಂಬಾ ಆರೋಗ್ಯಕರವಾಗಿದ್ದು, ಬೋರ್ಡ್‌ನಲ್ಲಿರುವ ಎಲ್ಲಾ ಐದು ಉಪಕರಣಗಳನ್ನು ಸ್ವಿಚ್ ಆನ್ ಮಾಡಲಾಗಿದೆ. ಇವುಗಳು ಸುಂದರವಾದ ಡೇಟಾವನ್ನು ನೀಡುತ್ತಿದೆ. ಇನ್ನೂ ಹತ್ತು ದಿನಗಳು ಉಳಿದಿವೆ. ವಿವಿಧ ವಿಧಾನಗಳ ಸಂಪೂರ್ಣ ಸಾಮರ್ಥ್ಯದೊಂದಿಗೆ ನಾವು ಎಲ್ಲಾ ಪ್ರಯೋಗಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ತಿಳಿಸಿದರು.

lokesh

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 hour ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

1 hour ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

2 hours ago