ಎಸ್‌ಪಿಪಿ ಬದಲಾದರೂ ತಪ್ಪಿಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು : ದರ್ಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಪಿಪಿ ಬದಲಾವಣೆ ಮಾಡಿದರು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಪೊಲೀಸ್‌ ಅಧಿಕಾರಿಗಳು ಧಕ್ಷತೆಯಿಂದಲೇ ಕಾರ್ಯ ನಿರ್ವಹಿಸುತ್ತಾರೆ. ನಾನಾಗಲಿ ಮುಖ್ಯಮಂತ್ರಿಗಳಾಗಲಿ ಲೀಗಲ್‌ ಅಡ್ವೈಸ್‌ ಪಡೆದ ಬಳಿಕವೇ ಎಸ್‌ಪಿಪಿ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ.

ಒಂದು ವೇಳೆ ಎಸ್‌ಪಿಪಿ ಬದಲಾವಣೆ ಮಾಡಿದರೂ ಅದರಲ್ಲಿ ಯಾವುದೇ ತಪ್ಪು ಇಲ್ಲ. ಬದಲಾವಣೆ ಮಾಡಿದರೆ ಅದಕ್ಕೆ ಬಲವಾದ ಕಾರಣ ಇರುತ್ತದೆ ಎಂದು ತಿಳಿಸಿದರು.

ದರ್ಶನ್‌ ಪ್ರಕರಣವನ್ನು ಯಾವುದೇ ಮುಲಾಜಿಗೂ ಒಳಗಾಗದೆ ಪಾರದರ್ಶಕವಾಗಿ ತನಿಖೆ ಮಾಡಲಾಗುತ್ತಿದೆ. ಯಾರ ಒತ್ತಡಕ್ಕು ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಪರಮೇಶ್ವರ್‌ ತಿಳಿಸಿದರು.