ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗಿದೆ. ಇದುವರೆಗೂ ನಮಗೆ ಕಮಿಷನ್ ಕೇಳಿಲ್ಲ. ಒಂದು ವೇಳೆ ನನಗೆ ಕೇಳಿದರೆ ನಾನೇ ಬಹಿರಂಗ ಮಾಡುತ್ತೇನೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಶೇ.40ರಷ್ಟು ಕಮಿಷನ್ ವ್ಯವಹಾರ ನಡೆಯುತ್ತಿತ್ತು. ಆ ಬಗ್ಗೆ ಪ್ರಸ್ತಾಪ ಮಾಡಿದ್ದೆವು. ಮೂರು ವರ್ಷಗಳ ಕಾಲ ಬಿಜೆಪಿ ಸರ್ಕಾರದಲ್ಲಿ ಹೋರಾಟ ನಡೆಸಲಾಗಿತ್ತು. ಈಗ ತಮ್ಮನ್ನು ಪ್ರಶ್ನೆ ಮಾಡುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕಾರದಲ್ಲಿದ್ದಾಗ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.
ಹಲವು ಬಾರಿ ತನಿಖೆಗೆ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಈ ಸರ್ಕಾರ ಬಂದು ಇನ್ನೂ ತಿಂಗಳಾಗಿದೆ. ಶೇ. 40 ರಷ್ಟು ಕಮಿಷನ್ ಕೇಳುತ್ತದೆಯೋ ಇಲ್ಲವೋ ಗೊತ್ತಿಲ್ಲ. ಒಂದು ವೇಳೆ ಕೇಳಿದರೆ ನಾನೇ ಬಹಿರಂಗ ಮಾಡುತ್ತೇನೆ. ಅನಗತ್ಯವಾಗಿ ಆರೋಪ ಮಾಡಲು ಹೋಗುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಮೃದು ಧೋರಣೆ ಅನುಸರಿಸುವುದಿಲ್ಲ ಎಂದರು.
ಮುಖ್ಯಮಂತ್ರಿಯೊಂದಿಗಿನ ಸಭೆಯಲ್ಲಿ ಸರ್ಕಾರಕ್ಕೆ ಏನು ಹೇಳಬೇಕೊ ಅದನ್ನು ಹೇಳಿದ್ದೇವೆ. ಗುತ್ತಿಗೆದಾರರಿಗೆ ಸರ್ಕಾರದಿಂದ 20 ಸಾವಿರ ಕೋಟಿ ರೂ.ಗಳ ಬಿಲ್ ಪಾವತಿ ಆಗಬೇಕಿದೆ. ಅದನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಇದರ ಹೊರತಾಗಿ ಶೇ.40ರಷ್ಟು ಕಮಿಷನ್ ಸೇರಿದಂತೆ ಬೇರಾವ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಸರ್ಕಾರದ ಮೇಲಿನ ಶೇ.40ರಷ್ಟು ಕಮಿಷನ್ ಆರೋಪಗಳಿವೆ. ಸಮಯ ಬಂದಾಗ ದಾಖಲಾತಿ ಬಿಡುಗಡೆ ಮಾಡುತ್ತೇವೆ. ಸದ್ಯಕ್ಕೆ ಪ್ರಕರಣ ನ್ಯಾಯಾಲಯದ ಮೆಟ್ಟಿಲಿನಲ್ಲಿದೆ. ಹೀಗಾಗಿ ಪ್ರಸ್ತುತ ಆ ವಿಚಾರದ ಬಗ್ಗೆ ಹೆಚ್ಚು ಚರ್ಚಿಸುವುದಿಲ್ಲ ಎಂದು ತಿಳಿಸಿದರು
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…