ಬೆಂಗಳೂರು : ಹಾಸನದ ಸಿಡಿ ವಿಚಾರವಾಗಿ ತನಿಖೆಗೆ ಆದೇಶ ಮಾಡಲಾಗಿದೆ, ತನಖೆಯಲ್ಲಿ ತಪ್ಪು ಸಾಬೀತಾದರೆ ಶಿಕ್ಷೆ ಆಗಲೇ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡ ಅವರಾಗಲಿ ನಾನಾಗಲಿ ಹೆಣ್ಣು ಮಕ್ಕಳಿಗೆ ಎಂದಿಗೂ ಅನ್ಯಾಯ ಆಗಲು ಬಿಟ್ಟಿಲ್ಲ. ಅವರ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ, ಅವರ ಕಷ್ಟಗಳನ್ನು ಪರಿಹರಿಸಿ ಕಳಿಸುವ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದರು.
ಹಾಸನದ ಸಂಸದ ಪ್ರಜ್ವಲ್ ರೇವಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆಯಲ್ಲಿ ಎಲ್ಲಾ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಡಿರಲಿ ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದರು.
ವಿದೇಶದಿಂದ ಅಧಿಕಾರಿಗಳು ಕರೆದು ತರುತ್ತಾರೆ : ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದರೆ ನಾನೇನು ಮಾಡಲಿ, ಎಸ್‌ಐಟಿ ತಂಡವನ್ನು ರಚಿಸಲಾಗಿದೆ. ಅಲ್ಲಿಯ ಅಧಿಕಾರಿಗಳು ಪ್ರಜ್ವಲ್‌ರನ್ನು ಕರೆತರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.
ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ,…
ಮೈಸೂರು: ನಾಲ್ಕು ದಶಕಕ್ಕೂ ಹೆಚ್ಚು ಕಾಲ ಜನರನ್ನು ರಂಜಿಸಿದ್ದ ನಗರದ ಸರಸ್ವತಿ ಚಿತ್ರಮಂದಿರ ನೆನಪಿನಂಗಳಕ್ಕೆ ಸರಿಯುತ್ತಿದೆ. ಪ್ರೇಕ್ಷಕರ ಕೊರತೆಯಿಂದ ಕೋವಿಡ್…
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಅನೇಕ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.…
ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು…
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕೇಂದ್ರ…
ಮುಂಬೈ: ಇನ್ನು 10 ದಿನದೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಹತ್ಯೆ ಮಾಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ…