BREAKING NEWS

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ದೇಶದ ಆರ್ಥಿಕತೆಯ ಬೆಳವಣಿಗೆ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು- ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ. ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ. ಈ ಕಾರಣಕ್ಕೆ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದರು.

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದು ಸಭಿಕರನ್ನು ಪ್ರಶ್ನಿಸಿದರು.

ಸಿದ್ದಲಿಂಗಯ್ಯನವರ ಕವನಗಳು ಸಮಾಜದ ವಸ್ತು ಸ್ಥಿತಿಗೆ ಕನ್ನಡಿ ಹಿಡಿದಿವೆ. ಅಸಮಾನತೆ, ತಾರತಮ್ಯದ ವಿರುದ್ಧ ಸಮಾಜವನ್ನು ಎಚ್ಚರಿಸುವ ಧ್ವನಿ ಸಿದ್ದಲಿಂಗಯ್ಯ ಅವರ ಕವನಗಳಲ್ಲಿವೆ. ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದು ಸ್ಮರಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಚಳವಳಿಗಳ ಉತ್ಪತ್ತಿ. ಇಚರು ಬಜೆಟ್ ನಲ್ಲಿ ಕೊಟ್ಟಿರುವ ಕಾರ್ಯಕ್ರಮಗಳು, ದಲಿತರ ಪರವಾದ ಕಾಯ್ದೆ ಮತ್ತು ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿರುವುದೇ ಅವರು ಸಂವಿಧಾನದ ನಿಜವಾದ ರಕ್ಷಕರು ಮತ್ತು ಪಾಲಕರು ಎಂದು ಬಣ್ಣಿಸಿದರು.

ಕಾರ್ಯಕ್ರಮದ ನಿರೂಪಕ ಲಕ್ಷ್ಮೀನಾರಾಯಣ್ ,ಕುವೆಂಪು ಅವರು 40 ರ ದಶಕದಲ್ಲಿ ದಲಿತ-ಬಡವರ ಏಳಿಗೆಗೆ ಕಲ್ಕಿಯ ಉದಯ ಆಗಬೇಕು ಎನ್ನುವ ಆಶಯದ ಕವನ ಬರೆದಿದ್ದರು. 1948 ರಲ್ಲಿ ಕುವೆಂಪು ಕನಸಿನ ಕಲ್ಕಿ ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಜನಿಸಿದರು. ಅವರೇ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಣ್ಣಿಸಿದರು.

ಮಾಜಿ ಸಚಿವ ಹೆಚ್.ಆಂಜನೇಯ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

andolanait

Recent Posts

ಮೈಸೂರು ಮುಡಾ ಕಚೇರಿಗೆ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಭೇಟಿ

ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…

8 hours ago

ಪ್ರಧಾನಿ ನರೇಂದ್ರ ಮೋದಿ ಸಂವಿಧಾನವನ್ನೇ ಓದಿಲ್ಲ ಎಂದ ರಾಹುಲ್‌ ಗಾಂಧಿ

ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…

8 hours ago

ಆದಿವಾಸಿಗಳ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…

9 hours ago

ರಾಜ್ಯದಲ್ಲಿ ನವೆಂಬರ್.‌14ರಿಂದ ಮತ್ತೆ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…

9 hours ago

ಶಬರಿಮಲೆಗೆ ತೆರಳುವವರಿಗೆ ಸಿಹಿಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…

9 hours ago

ಕಾಂಗ್ರೆಸ್‌ ವಿರುದ್ಧ ಮತ್ತೆ ಗುಡುಗಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್‌ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…

10 hours ago