BREAKING NEWS

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಮುಖ್ಯಮಂತ್ರಿ ಸಿದ್ದರಾಮಯ್ಯ !

ಶಿರಸಿ : ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಾಂಬ್ ಸ್ಪೋಟ ಪ್ರಕರಣ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವುದೇ ಬೆದರಿಕೆ ಬಂದಿಲ್ಲ ಎಂದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.

ದೇಶದ್ರೋಹಿಗಳು ಯಾರು : ಪಾಕ್ ಪರ ಘೋಷಣೆ ಪ್ರಕರಣದ ಎಫ್ ಎಸ್ ಎಲ್ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿಳಿಸುತ್ತಿಲ್ಲ ಎಂಬ ಬಿಜೆಪಿಯವರ ಟೀಕೆಗೆ ಉತ್ತರಿಸುತ್ತಾ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಆಗ ಆ ಸರ್ಕಾರ ಪ್ರಕರಣವನ್ನೇ ವಜಾಗೊಳಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಇದರಿಂದ ಯಾರು ದೇಶದ್ರೋಹಿಗಳು ಎಂದು ತಿಳಿಯುತ್ತದೆ ಎಂದರು.

ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಶೀಘ್ರ : “ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ. ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದರು.

ಅನಂತಕುಮಾರ್ ಹೆಗಡೆಯವರಿಗೆ ಸಂಸ್ಕೃತಿ ಇಲ್ಲ : ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ. ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಪ್ರಶ್ನಿಸಿದರು.

ಜಿಲ್ಲೆಗೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿದ್ದು, ಈ ಬಗ್ಗೆ ಆಯವ್ಯಯದಲ್ಲಿ ಪ್ರಸ್ತಾಪವಿಲ್ಲದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು

andolana

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

35 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

1 hour ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

1 hour ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago