BREAKING NEWS

ಬಿಜೆಪಿ ಸರ್ಕಾರ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆ ಹತ್ಯೆಗೆ ಕಾರಣ:ಎಚ್‌ಡಿಕೆ

ಬೆಂಗಳೂರು: ಕನಕಪುರ ತಾಲ್ಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.‌ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಮಂಡ್ಯ ಮೂಲದ ಇರ್ಗೀಷ್ ಪಾಷ ಅನುಮಾನಸ್ಪದವಾಗಿ ಮೃತಪಟ್ಟಿದ್ದರು.

ಈ ಘಟನೆಯನ್ನು ಖಂಡಿಸಿರುವ ಕುಮಾರಸ್ವಾಮಿ, ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂಥದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ? ಎಂದು ಪ್ರಶ್ನಿಸಿದ್ದಾರೆ.

ಯುವಕನ ಕೊಲೆಯಾದ ರಾತ್ರಿ ಆರೋಪಿ ಮತ್ತವನ ಸಹಚರರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದು ಗೋ ರಕ್ಷಕನ ಸೋಗು ಹಾಕಿಕೊಂಡು ಪಹರೆ ಕಾಯುವ ನಾಟಕದ ವಿಡಿಯೋ ಮಾಡಿ ತನ್ನ ಜಾಲತಾಣದಲ್ಲಿಯೇ ಹಾಕಿಕೊಂಡಿದ್ದಾನೆ. ಅವರ ಉದ್ದೇಶವೇ ಬೇರೆ ಇತ್ತು ಎನ್ನುವುದು ಸ್ಪಷ್ಟ. ಇದಕ್ಕಿಂತ ಸಾಕ್ಷಿ ಬೇಕೆ? ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾತ್ರಿ ಹೊತ್ತು ಇವರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದುಕೊಂಡು ಗಸ್ತು ತಿರುಗುತ್ತಿದ್ದರು ಎಂದರೆ, ಇವರಿಗೆ ಪೊಲೀಸರ ಮೌನ ಅನುಮತಿ ಇತ್ತಾ? ಇಲ್ಲವೇ, ಇವರೇನು ಮಫ್ತಿ ಪೊಲೀಸರಾ? ಅಥವಾ ಗೋ ರಕ್ಷಣೆ ನೆಪದಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದರಾ? ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ ಎಂದು ಹೇಳಿದ್ದಾರೆ.

ನಿಜಕ್ಕಾದರೆ, ಗೋ ಸಂಕ್ಷಣೆಯ ಸೋಗಿನ ಈ ಸೋಗಲಾಡಿಗಳಿಗೆ ಆಶ್ರಯ, ಮೇವು ಇಲ್ಲದೆ ಬೀದಿಪಾಲಾಗಿರುವ ಅನಾಥ ಗೋವುಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆದರೆ, ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ. ಪೊಲೀಸ್ ವ್ಯವಸ್ಥೆ ಗಾಢ ನಿದ್ದೆಯಲ್ಲಿದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ ಎಂದು ಹೇಳಿದ್ದಾರೆ.

andolanait

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

12 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

12 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

13 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

13 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

13 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

15 hours ago