ಶ್ರೀನಗರ: ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದರೆ ಎಲ್ಲಾ ಧರ್ಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಹೇಳಿದ್ದಾರೆ.
ಇಂದು ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿಯನ್ನು ಜಾರಿಗೊಳಿಸುವುದು “ಆರ್ಟಿಕಲ್ 370 ರದ್ದುಗೊಳಿಸದಂತೆ ಸುಲಭವಲ್ಲ” ಎಂದಿದ್ದಾರೆ.
“ಅದನ್ನು ಜಾರಿಗೊಳಿಸುವ(ಯುಸಿಸಿ) ಪ್ರಶ್ನೆಯೇ ಇಲ್ಲ. 370ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದು ಸುಲಭವಲ್ಲ. ಎಲ್ಲಾ ಧರ್ಮಗಳು ಇದರಲ್ಲಿ ಭಾಗಿಯಾಗಿವೆ. ಮುಸ್ಲಿಮರು ಮಾತ್ರವಲ್ಲ, ಕ್ರಿಶ್ಚಿಯನ್ನರು ಮತ್ತು ಸಿಖ್ಖರು, ಆದಿವಾಸಿಗಳು, ಜೈನರು, ಪಾರ್ಸಿಗಳು ಸೇರಿದಂತೆ ಎಲ್ಲ ಜನರಿಗೂ ತೊಂದರೆಯಾಗಲಿದೆ. ಇದರಿಂದ ಯಾವುದೇ ಸರ್ಕಾರಕ್ಕೂ ಒಳ್ಳೆಯದಾಗುವುದಿಲ್ಲ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.
ದೇಶದಲ್ಲಿ ಯುಸಿಸಿ ಜಾರಿಗೊಳಿಸುವ ಬಗ್ಗೆ ಯೋಚಿಸಬೇಡಿ ಎಂದು ನಾನು ಈ ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…