ರಾಮನಾಥಪುರ: ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ “ದುರ್ಬಲವಾಗಿದೆ” ಎಂಬುದನ್ನು ತೋರಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಮೀನುಗಾರರ ಕಲ್ಯಾಣ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಟಾಲಿನ್, 1974ರಲ್ಲಿ ಪರಸ್ಪರ ಒಪ್ಪಂದದ ಮೂಲಕ ಶ್ರೀಲಂಕಾಕ್ಕೆ ಬಿಟ್ಟುಕೊಟ್ಟಿದ್ದ ಕಚ್ಚತೀವು ದ್ವೀಪವನ್ನು ಹಿಂಪಡೆಯುವುದೇ ಮೀನುಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಎಂದು ಪುನರುಚ್ಚರಿಸಿದ್ದಾರೆ.
ಆಡಳಿತಾರೂಢ ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್, ತಮ್ಮ ತಂದೆ ಮತ್ತು ದಿವಂಗತ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ಕಚ್ಚತೀವು ಭಾರತಕ್ಕೆ ಸೇರಿದ್ದು ಎಂದು ವರದಿ ನೀಡಿದ್ದರು ಎಂದರು.
1974 ರಲ್ಲಿ ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪವನ್ನು ನೀಡಿದ್ದು ಇಂದಿರಾ ಗಾಂಧಿ ಸರ್ಕಾರ ಎಂದು ಪ್ರಧಾನಿ ಮೋದಿ ಅವರು ಹೇಳಿದ ಕೆಲವೇ ದಿನಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ದ್ವೀಪ ಹಿಂಪಡೆಯುವ ಹೇಳಿಕೆ ನೀಡಿದ್ದಾರೆ.
ಪ್ರಸ್ತುತ ಎನ್‌ಡಿಎ ಆಡಳಿತದಲ್ಲಿ ಲಂಕಾ ನೌಕಾಪಡೆಯಿಂದ ತಮಿಳುನಾಡು ಮೀನುಗಾರರ ಮೇಲೆ ದಾಳಿಗಳು ಹೆಚ್ಚುತ್ತಿವೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.
ಶ್ರೀಲಂಕಾ ನೌಕಾಪಡೆಯಿಂದ ಭಾರತೀಯ ಮೀನುಗಾರರಿಗೆ ನಿರಂತರ ಕಿರುಕುಳ ಮತ್ತು ದಾಳಿಯನ್ನು ಮೀನುಗಾರರ ಸಮಾವೇಶ ಖಂಡಿಸಿದೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…