ಅಮೇರಿಕನ್ ಬುಲ್‌ಡಾಗ್ಸ್, ರಾಟ್‌ವೀಲರ್ಸ್ ಮತ್ತು ಮ್ಯಾಸ್ಟಿಫ್ಸ್ ಸೇರಿದಂತೆ 23 ತಳಿಗಳ ಅಪಾಯಕಾರಿ ನಾಯಿಗಳ ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿತವಾದ ತಜ್ಞರ ಸಮಿತಿಯು ಅಪಾಯಕಾರಿ ತಳಿ ನಾಯಿಗಳ ಆಮದನ್ನು ನಿಷೇಧಿಸುವಂತೆ ಶಿಫಾರಸು ಮಾಡಿದೆ.
ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪಿಇಟಿಯ) ಇಂಡಿಯಾದ ಮನವಿ ಮತ್ತು ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ರಿಟ್ ಅರ್ಜಿಯ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಒ.ಪಿ.ಚೌಧರಿ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಕಳುಹಿಸಿದ್ದು, ಅಪಾಯಕಾರಿ ತಳಿಗಳೆಂದು ಗುರುತಿಸಲಾದ ನಾಯಿಗಳ ಸಾಕಣೆ ಮತ್ತು ಮಾರಾಟವನ್ನು ನಿಷೇಧಿಸಬೇಕು ಎಂದು ಸ್ಥಳೀಯ ಸಂಸ್ಥೆಗಳು, ಪಶುಸಂಗೋಪನೆ ಇಲಾಖೆಗೆ ಒತ್ತಾಯಿಸಿದ್ದಾರೆ.
ಅಮೆರಿಕ, ಬ್ರಿಟನ್, ಜರ್ಮನಿ, ಡೆನ್ಮಾರ್ಕ್, ಸ್ಪೇನ್, ಕೆನಡಾ, ಇಟಲಿ ಮತ್ತು ಫ್ರಾನ್ಸ್ ಸೇರಿದಂತೆ 41 ದೇಶಗಳಲ್ಲಿ ಪಿಟ್‌ಬುಲ್ ಅನ್ನು ನಿಷೇಧಿಸಲಾಗಿದೆ.
ಅಪಾಯಕಾರಿ ತಳಿಗಳು: ಪಿಟ್‌ಬುಲ್ ಟೆರಿಯರ್‌ಗಳು, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ಟಾರ್ನ್‌ಜಾಕ್, ಬ್ಯಾಂಡೋಗ್, ಸರ್ಪ್ಲಾನಿನಾಕ್, ಜಪಾನೀಸ್ ತೋಸಾ, ಅಕಿತಾ, ಮಾಸ್ಟಿಫ್ಸ್, ರಾಟ್‌ವೀಲರ್, ರೋಡೇಶಿಯನ್ ರಿಡ್ಜ್‌ಬ್ಯಾಕ್, ಮಾಸ್ಕೋಲ್ ಡೊಗ್‌ಬಾಗ್, ಮಾಸ್ಕೋಲ್ ಗಾರ್ಡ್‌ಬಾಗ್, ವಾರಿಯೊ, ಜರ್ಮನ್ ಶೆಫರ್ಡ್ ಇತ್ಯಾದಿ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…